ಬೆಳಗಾವಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ.
11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ಯಾವೆ ಎಂದರು. ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ ಶೈಕ್ಷಣಿ ಸಾಲಿನ ಅಂತ್ಯದವರೆಗೂ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿರುವುದರಿಂದ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ ಎಂದು ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿದಂತೆ 2500 ಶಿಕ್ಷಕರುಗಳ ಹುದ್ದೆಗಳನ್ನು 15,000 ಪದವೀಧರರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ ಎಂದು ಹೇಳಿದ್ದಾರೆ.
15,000 ಹುದ್ದೆಗಳಲ್ಲಿ ಪ್ರೌಝ ಶಾಲಾ ಶಿಕ್ಷರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರವೇ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ದಿನಾಂಕ 25-05-2024 ರಂದು , ಅರ್ಥಕ ಇಲಾಖೆಗೆ ಕಳುಹಿಸಲಾಗಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ.
ದಿನಾಂಕ 07-10-2024ರ ಆದೇಶದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳಲ್ಲಿ ಒಟ್ಟು 385 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.