ಛತ್ತೀಸ್‌ಗಢದ ಬಿಜಾಪುರದಲ್ಲಿ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಶವವಾಗಿ ಪತ್ತೆಯಾಗಿದ್ದಾರೆ.

WhatsApp Group Join Now

ಛತ್ತೀಸ್‌ಗಢದ ಬಿಜಾಪುರದಲ್ಲಿ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಮುಖೇಶ್ ಅವರ ಶವವನ್ನು ಬಿಜಾಪುರ ನಗರದ ಚಟ್ಟನ್‌ಪಾರಾ ಪ್ರದೇಶದಲ್ಲಿ ಗುತ್ತಿಗೆದಾರರೊಬ್ಬರ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಿಂದ ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪತ್ರಕರ್ತನನ್ನು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.

ಪತ್ರಕರ್ತನ ಶವ ಪತ್ತೆಯಾದ ಜಾಗ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರಿಗೆ ಸೇರಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಕೊಲೆ ಪ್ರಕರಣ ದಾಖಲಾಗಿದೆ. ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಬಹಿರಂಗಪಡಿಸಿದ್ದಕ್ಕಾಗಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮುಖೇಶ್ ಚಂದ್ರಾಕರ್ ಅವರು ಬಸ್ತರ್ ಜಂಕ್ಷನ್ ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದರು.

ಬಿಜಾಪುರ ನಿವಾಸಿ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಜನವರಿ 1 ರ ರಾತ್ರಿಯಿಂದ ತಮ್ಮ ಮನೆಯಿಂದ ಕಾಣೆಯಾಗಿದ್ದಾರೆ ಎಂದು ಅವರ ಅಣ್ಣ ಯುಕೇಶ್ ಚಂದ್ರಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಮುಖೇಶ್ ಚಂದ್ರಕರ್ ನಾಪತ್ತೆಯಾದ ಬಗ್ಗೆ ಮಾಹಿತಿ ಪಡೆದ ನಂತರ.
ಪೊಲೀಸ್ ತಂಡವನ್ನು ರಚಿಸಿ ಪತ್ತೆ ಕಾರ್ಯ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲ ಸಮಯದ ಹಿಂದೆ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ರಸ್ತೆ ನಿರ್ಮಾಣದ ಬಗ್ಗೆ ಸುದ್ದಿ ಪ್ರಸಾರ ಮಾಡಿದ್ದಾರೆ ಇದರ ನಂತರ ಗುತ್ತಿಗೆದಾರ ಮತ್ತು ಪತ್ರಕರ್ತರ ನಡುವೆ ಮನಸ್ತಾಪ ಮೂಡಿದೆ ಎಂದು ಸ್ಥಳೀಯ ಪತ್ರಕರ್ತರು ತಿಳಿಸಿದ್ದಾರೆ.

About The Author