ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳ ವಿತರಣೆ ಕಾರ್ಯಕ್ರಮಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ
ಶಾಸಕರ ಕಚೇರಿಯ ಮುಂದೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕ ಪಂಚಾಯತ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಕಲಚೇತನರಿಗೆ ಉಚಿತವಾಗಿ ಯಂತ್ರಚಾಲಿತ ತ್ರಿಚಕ್ರ ಬೈಕಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅನೇಕ ವಾಹನಗಳನ್ನು ನೀಡುವದರಿಂದ ಮನೆಯಲ್ಲಿರದೇ ವಿನಾಕಾರಣ ಹೊರಗಡೆ ಅಲೆದಾಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬೈಕಗಳನ್ನು ಅನಾವಶ್ಯಕವಾಗಿ ಅಲೆದಾಡದೇ ಅವಶ್ಯಕ ಕಾರ್ಯಕ್ಕೆ ಬಳಕೆ ಮಾಡಬೇಕು. ಅಲ್ಲದೇ ವಾಹನ ಚಲಾವಣೆ ಸಂದರ್ಭದಲ್ಲಿ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿ ತಮ್ಮ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ ಅವರು, ಈಗ 20 ಜನರಿಗೆ ಬೈಕಗಳನ್ನು ನೀಡಲಾಗುತ್ತಿದ್ದು, ಇನ್ನೂ ಅನೇಕ ಜನರು ಅರ್ಜಿ ಸಲ್ಲಿಸಿದ್ದು, ಹಂತ ಹಂತವಾಗಿ ಅವರಿಗೂ ಸಹ ಬೈಕ ನೀಡುವ ಕೆಲಸವನ್ನು ಮಾಡಲಾಗುವದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಇಒ ಬಸವರಾಜ ಐನಾಪೂರ, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ಸಿಡಿಪಿಓ ಶಂಕರ ಕುಂಬಾರ, ಮೇಲ್ಚಿಚಾರಕಿ ಮಂಜುಳಾ ರಗಟೆ, ವಿಕಲಚೇತನರ ಇಲಾಖೆಯ ಅಧಿಕಾರಿ ಉಮೇಶ ಬಳಿಗಾರ, ಮುಖಂಡರಾದ ಶಿದ್ಲಿಂಗಪ್ಪ ಶಿಂಗಾರಗೊಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು

About The Author