ಸವದತ್ತಿ, ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಸಹಯೋಗದಲ್ಲಿ ಮಾರ್ಚ್ 18-2025 ರಂದು ನ್ಯಾಯವಾದಿಗಳ ಹೊಸ ಸಬಾಭವನದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ. ಶಶಿಧರ ಎಮ್.ಗೌಡ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೇರವೇರಿಸಿದರು. ನಂತರ ಮಾತನಾಡಿದ ಅವರು ಜಗತ್ತಿನ ಎಲ್ಲ ದೇಶಗಳು ಸಹ ಅಭಿವೃದ್ಧಿಯ ಪಥದಲ್ಲಿ ತಾವು ಮುಂಚೂಣಿಯಲ್ಲಿರಬೇಕು ಎಂದು ಬಯಸುತ್ತಿರುವ ಈ ಸಂದರ್ಭದಲ್ಲಿ, ತಂತ್ರಜ್ಞಾನ, ಆವಿಷ್ಕಾರಗಳೊಂದಿಗೆ ಅನ್ಯಗ್ರಹದಲ್ಲಿ ವಾಸಿಸಲು ಯೋಗ್ಯ ಸ್ಥಳವನ್ನು ಹುಡುಕುತ್ತಿರುವ ಪ್ರಯತ್ನಗಳ ಸಂದರ್ಭದಲ್ಲಿ ಇಂದು ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ ತಂತ್ರಜ್ಞಾನ, ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಕೊಡುಗೆಯನ್ನು ಸ್ಮರಿಸಲು, ಗೌರವಿಸಲು ಈ ದಿನವನ್ನು ಅವರಿಗೆ ಮೀಸಲಿರಿಸಲಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿ ಭಾಷಣ ಮಾಡಿದ ಗೌರವಾನ್ವಿತ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಶ್ರೀ. ಸಿದ್ರಾಮ ರೆಡ್ಡಿ, ರವರು ಮಾತನಾಡಿ ಪ್ರಸ್ತುತ ವಿದ್ಯಮಾನಗಳಲ್ಲಿ ಕಂಡುಬಂದ ಮಹಿಳೆಯರ ಕೊಡುಗೆ, ಅವರ ಪಾತ್ರ, ಪ್ರಾಮುಖ್ಯತೆ, ಮಹಿಳೆಯರ ಸ್ಥಾನಮಾನ, ಗೌರವ, ಅವರ ಕೊಡುಗೆ, ಹಕ್ಕುಗಳು, ಪ್ರಜಪ್ರಭುತ್ವದಲ್ಲಿ ಅವರಿಗೆ ಸಿಗಬೇಕಾದ ಸ್ಥಾನಗಳು, ಅವಕಾಶಗಳು, ಹಲವು ಅಂಶಗಳನ್ನು ಉದ್ದೇಶಿಸಿ ಮಾತನಾಡಿದರು.
ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಶ್ರೀಮತಿ. ಎನ್.ಎಸ್.ವಂಟಮುರಿ, ರವರು ಮಾತನಾಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ 8 ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ. 1975 ರ “ಅಂತರಾಷ್ಟ್ರೀಯ ಮಹಿಳೆಯರ ದಿನ”ದ ಸಮಯದಲ್ಲಿ, ಮಾರ್ಚ್ 8 ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನವನ್ನ ಆಚರಿಸಲು ಆರಂಭಿಸಿದವು. ಎರಡು ವರ್ಷದ ನಂತರ,1997 ರಲ್ಲಿ, “ದಿ ಜನರಲ್ ಅಸ್ಸೆಂಬ್ಲಿ” ಮಹಿಳೆಯರ ಹಕ್ಕು ಮತ್ತು ಶಾಂತಿ ಸ್ಥಾಪನೆಯನ್ನ ಆಯಾ ದೇಶದ ಸದಸ್ಯರು ಗಮನಿಸಿ ತಮ್ಮ ದೇಶದ ಐತಿಹಾಸಿಕ ಮತ್ತು ರಾಷ್ಟ್ರೀಯ ಸಂಪ್ರದಾಯಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವಂತೆ ಕರೆ ನೀಡಿತು. ಹೀಗೆ ಕರೆನೀಡುವಾಗ ಮಹಿಳೆಯ ಪಾತ್ರ ಹಾಗು ಅವರ ಮೇಲೆ ನಡೆಯುತ್ತಿರುವ ಪಕ್ಷಪಾತವನ್ನ ಗಮನಿಸಿ ಅವರಿಗೆ ಸ್ಪರ್ಧಿಸುವ ಪೂರ್ತಿ ಅವಕಾಶವನ್ನು ನೀಡುವಂತೆ ಘೋಷಿಸಿತು ಎಂದರು.
ಕಾರ್ಯಕ್ರಮದಲ್ಲಿ ಸವದತ್ತಿಯ ಸ್ತ್ರೀ ರೋಗ ತಜ್ಞರಾದ ಡಾ. ಪಲ್ಲವಿ ನಾವದಗಿ ರವರಿಗೆ ಹಾಗೂ ಎ.ಜೆ.ಪಿ. ಶ್ರೀ. ಜಿ.ಜಿ.ಕಣವಿ, ವಕೀಲರಿಗೆ ಗೌರವ ಸನ್ಮಾನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ಕ್ರಿಡೆಗಳಲ್ಲಿ ಬಾಗವಹಿಸಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ, ಸಹಾಯಕರ ಸರ್ಕಾರಿ ಅಭಿಯೋಜಕರಾದ ಎ.ಎ.ನೇಸರಿಕರ, ಎಸ್.ಎಸ್.ಅಂಗಡಿ, ಹಾಗೂ ನ್ಯಾಯವಾದಿಗಳಾದ ಬಿ.ವಿ.ಮಲಗೌಡರ, ಸಿ.ಜಿ.ತುರಮರಿ, ಎಮ್.ಬಿ.ದ್ಯಾಮನಗೌಡರ, ಎಮ್.ಜಿ.ವಟ್ನಾಳ, ಎಸ್.ಬಿ.ಯಲ್ಲರಡ್ಡಿ, ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳಾದ ಎಸ್.ವಾಯ್.ಶಿಬಾರಗಟ್ಟಿ ಸ್ವಾಗತಿಸಿದರು, ಜೆ.ಎಸ್.ಪೂಜೇರ ನಿರೂಪಿಸಿದರು. ವಿ.ವಿ.ಅಂಗಡಿ ವಂದಿಸಿದರು.



