12 August 2026
Advertisement
ರಾಜ್ಯ

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಟ್ಟಿದ್ದ ಮನೆ ಮೇಲೆ ದಾಳಿ ನಡೆಸಿ 5.10 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡರು.

WhatsApp Group Join Now

ಸಿರುಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದ ಶಾಲಿಗನೂರು ರಸ್ತೆ ಬಳಿಯ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಇಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ಎಂ. ವಿಜಯ್ ಕುಮಾರ್ ಹಾಗೂ ಪೊಲೀಸ್ ಠಾಣೆಯ ಪಿ ಎಸ್ ಐ ಪರಶುರಾಮ ನೇತೃತ್ವದ ತಂಡ ದಾಳಿ ನಡೆಸಿ ₹11,730 ಮೌಲ್ಯದ 5.10 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಇಟ್ಟಿದ್ದ ಮನೆ ಮೇಲೆ ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಮನೆಯ ಮಾಲೀಕನ ವಿರುದ್ಧ ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author