ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಮೇ 12, 2025 ರಂದು ಬೆಳಿಗ್ಗೆ 11 ಗಂಟೆಗೆ ಭಗವಾನ್ ಬುದ್ಧ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ಮನಃಪೂರ್ವಕವಾಗಿ, ಅರ್ಥಗರ್ಭಿತವಾಗಿ ಆಚರಿಸೋಣ ಎಂದು ತಿಳಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಕಲಾಭವನದ ಆವರಣದಲ್ಲಿರುವ ಅಶೋಕ ಸ್ತಂಭಕ್ಕೆ ಪೂಜೆ ಸಲ್ಲಿಸಿ, ನಂತರ ಭಗವಾನ್ ಬುದ್ಧ ಅವರ ಭಾವಚಿತ್ರದ ಮೆರವಣಿಗೆಯನ್ನು ಆಲೂರು ವೆಂಕಟರಾವ್ ಸಭಾಭವನದವರೆಗೆ ನಡೆಯಲಿದೆ ಎಂದು ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.



