ಹಲಗತ್ತಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಣಿಗೊಂಡ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಲಲಿತಾ. ಲ. ಹೂಗಾರ, ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಆಯುಷ್ಮಾನ್ ಆರೋಗ್ಯ ಮಂದಿರ ಹಲಗತ್ತಿಯ
ಡಾ. ಬಸಪ್ಪ.ಮಾನಪ್ಪನವರ ಮಾತನಾಡಿ
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮನರೇಗಾ ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು. ದುಡಿಮೆ ಪದ್ಧತಿ ಮತ್ತು ವ್ಯವಸಾಯ ಪದ್ಧತಿಯು ಸಂಪೂರ್ಣ ಬದಲಾಗಿದ್ದು, ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿದೆ. ಅದ್ದರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಹೆಚ್ಚು ಪಾಲ್ಗೊಂಡು ಆರೋಗ್ಯ ಸಮಸ್ಯೆಗಳನ್ನು ವೈದ್ಯರ ಬಳಿ ಮುಕ್ತವಾಗಿ ಮಾತನಾಡಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾಶ್ರೀ. ಎ. ಗಣಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅನೇಕ ಖಾಯಿಲೆಗಳು ಕಂಡುಬರುತ್ತಿದ್ದು, ಉಚಿತ ಆರೋಗ್ಯ ಶಿಬಿರದಲ್ಲಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಇದ್ದರೆ, ಅದನ್ನು ಗುರುತಿಸಿ ಹೆಚ್ಚಿನ ಚಿಕಿತ್ಸೆ ನೀಡಲಾವುದು ಉಚಿತ ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ ರಕ್ತ ಪರೀಕ್ಷೆಗಳನ್ನು ಕೈಗೊಂಡು ಮಧುಮೇಹ, ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದಂತೆ, ಕಣ್ಣಿನ ಸಮಸ್ಯೆಗಳು, ಕಿವಿಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಯಿತು. ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಕುಟುಂಬಗಳು ಪಾಲ್ಗೊಂಡು ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಂಡರು ಎಂದು ಹೇಳಿದರು.

ಈ ಒಂದು ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಗೌರವ್ವ. ಯಂ. ಕಳ್ಳೆನ್ನವರ , ಕಸ್ತೂರವ್ವ. ಹ. ಶಿಂಪಿ, ಸುಭಾಸ. ಅ. ಗೋಡಿಕಟ್ಟಿ , ಮಂಜುನಾಥ್. ಗೋ. ಮುಧೋಳ, ಸುಜಾತಾ. ಪ್ರ. ಭಜಂತ್ರಿ, ಬಸಪ್ಪ. ಶಿ. ಮಡಿವಾಳರ, ಬಸಪ್ಪ. ಮ. ಬಿಸನಾಳ, ಸೋನವ್ವ. ರಾ. ದೊಡವಾಡ, ಪ್ರಕಾಶ್ ಚಿಕ್ಕುಂಬಿ, ಮುತ್ತವ್ವ. ಮ. ಸಾವಳಗಿ ,ಹಲಗತ್ತಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು , ಗ್ರಾಮಸ್ಥರು ಉಪಸ್ಥಿತರಿದ್ದರು.

About The Author