ವಿವಿಧ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ

WhatsApp Group Join Now

2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ 6ನೇ ತರಗತಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಶೇ.50 ಸ್ಥಾನಗಳನ್ನು ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಹಾಗೂ ಶೇ.50 ರಷ್ಟು ಸ್ಥಾನಗಳನ್ನು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ.

ವಿಶೇಷ ವರ್ಗಗಳ: ಸಫಾಯಿ ಕರ್ಮಚಾರಿ, ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಚಿಂದಿ ಆಯುವವರು, ಸ್ಮಶಾನ ಕಾರ್ಮಿಕರ ಮಕ್ಕಳು. ಬಾಲ ಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು, ಸಂಚಾರಿ ಕುರಿಗಾಹಿಗಳ ಮಕ್ಕಳು.

ಶೇ 25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು. ಗುರುತಿಸಿರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ-ಅತೀ ಸೂಕ್ಷ್ಮ ಸಮುದಾಯದ, ಸೈನಿಕರು ಮತ್ತು ಮಾಜಿ ಸೈನಿಕರು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತಗೊಂಡ ಪೋಷಕರ ಮಕ್ಕಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಅಥವಾ ಕ್ರೈಸ್ ವೆಬ್‍ಸೈಟ್ https:/kreis.karnataka.gov.in ಅಥವಾ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author