12 August 2026
Advertisement
ರಾಜ್ಯ

ಬಾಗಲಕೋಟೆ, ಗದಗ, ಹಾವೇರಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

WhatsApp Group Join Now

ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೆಳಗಾವಿಯ ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಬೆಳಗಾವಿಯಲ್ಲಿರುವ ಕಚೇರಿ, ಬೆಳಗಾವಿಯ ವಿದ್ಯಾನಗರದಲ್ಲಿರುವ ಅವರ ನಿವಾಸ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

About The Author