WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ
ಅಖಿಲ ಭಾರತ ವಕೀಲರ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ, ಸಂಸತಭವನ ನವದೆಹಲಿ ರವರಿಗೆ ಸವದತ್ತಿ ತಾಲೂಕಾ ವಕೀಲರ ಸಂಘದಿಂದ ತಹಶೀಲ್ದಾರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು
ಬೇಡಿಕೆಗಳು
- ಪೋಲಿಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024 ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ಮೋಚ್ಚ ನ್ಯಾಯಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು.
- ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು.
- ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ ರೂ. 10,000/- ಸ್ಟೈಪಂಡ್ (ಸಹಾಯಧನ) ನೀಡಬೇಕು.
- ರಾಜ್ಯದ ಎಲ್ಲಾ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ರೂ. 5 ಲಕ್ಷ ಅನುದಾನ ಮಂಜೂರು ಮಾಡಬೇಕು ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ರೂ. 10 ಲಕ್ಷ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು.
- ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು.
- ಜಿಲ್ಲಾ ನ್ಯಾಯಲಯಗಳ ಸಂಕೀರ್ಣಗಳಲ್ಲಿ ಅಕಾಡೆಮಿಗಳನ್ನು ಸ್ಥಾಪಿಸಬೇಕು.
- ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
- ರಾಜ್ಯದಲ್ಲಿನ ಎಲ್ಲಾ ನ್ಯಾಯಾಲಯಗಳ ಆವರಣಗಳಲ್ಲಿ ವಕೀಲರಿಗೆ ಚೇಂಬರ್‍ಗಳನ್ನು ಸ್ಥಾಪಿಸಬೇಕು.
- ರೆವೆನ್ಯೂ ಎಸಿ.ಡಿಸಿ ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಯದೇ ಸಕ್ರಮವಾದ ತೀರ್ಪುಗಳು ಆಗದೆ ಇರುವುದರಿಂದ ಕಂದಾಯ ಪ್ರಕರಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು.
- ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು.
- ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು ಹಾಗು ಈಗಿರುವ ಅನುದಾನಿತ ಮತ್ತು ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
- ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಕಛೇರಿಯನ್ನು ವಿಭಾಗಿಯ ಮಟ್ಟದಲ್ಲಿ ಸ್ಥಾಪಿಸಬೇಕು.
- ವಕೀಲರ ಸಂಘದ/ ಪರಿಷತ್ತಿನ ಚುನಾವಣೆಯಲ್ಲಿ ಮಹಿಳ ವಕೀಲರಿಗೆ ಶೇ. 33 ರಷ್ಟು ಮೀಸಲಾತಿ ನೀಡಬೇಕು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಅನುಸಾರ ಪ್ರಾತಿನಿತ್ಯ ನೀಡಬೇಕು. ಈ ಎಲ್ಲಾ ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದೇ ಇದ್ದಲ್ಲಿ ವಕೀಲರುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿ ನಮ್ಮ ನಡೆಯನ್ನು ವಿಧಾನಸೌಧ ವಕೀಲರ ಪರಿಷತಗಳ ಕಡೆ ನಡೆಸಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ, ಸಹ ಕಾರ್ಯದರ್ಶಿ ಆರ್.ವಿ.ಹುಂಬಿ, ವಕೀಲರಾದ ಬಿ.ಕೆ.ಕಡಕೋಳ, ಎಲ್.ಟಿ.ಹೊಸಮನಿ, ಸಿ.ಎಸ್.ಮುತ್ತಗಿ, ಎ.ಎಸ್.ಮಾನಗಾಂವ, ವಿ.ಎಸ್.ಮುನವಳ್ಳಿ, ಯು.ಆಯ್.ನವಲನ್ನವರ, ವಿ.ವಿ.ಮುನವಳ್ಳಿ, ಟಿ.ಎಮ್.ಸೂರ್ಯವಂಶಿ, ಇತರರು ಉಪಸ್ಥಿತರಿದ್ದರು.



