12 August 2026
Advertisement
ರಾಜ್ಯ

ಕರ್ತವ್ಯ ಲೋಪ ಆರೋಪ : ಗುಡೇನಕಟ್ಟಿ ಪಿಡಿಓ ಅಮಾನತಿಗೆ ಸಚಿವ ಸಂತೋಷ ಲಾಡ್ ಸೂಚನೆ, ಜಿಲ್ಲಾ ಪಂಚಾಯತ ಸಿಇಓ ರಿಂದ ಅಮಾನತು ಆದೇಶ

WhatsApp Group Join Now

ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ಹಿನ್ನೆಲೆಯಲ್ಲಿ ಗುಡೇನಕಟ್ಟಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಅಮಾನತುಗೊಳಿಸಲಾಗಿದೆ. ಅವಳಿ ಮಕ್ಕಳ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಅವರು ಇಂದು ಕುಂದಗೋಳ ತಾಲೂಕಿನ ಯರಿನಾರಾಯನಪುರ ಗ್ರಾಮಕ್ಕೆ ಭೇಟಿ ನೀಡಿದ್ದರು. ಸಾರ್ವಜನಿಕರ ಸುರಕ್ಷತೆಗೆ ಸರಿಯಾದ ಕ್ರಮಕೈಗೊಳ್ಳದ ಮತ್ತು ಗ್ರಾಮದ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸದೆ ಕರ್ತವ್ಯ ಲೋಪ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಪಿ.ಡಿ.ಒ ರನ್ನತಕ್ಷಣವೇ ಅಮಾನತುಗೊಳಿಸಲು ಆದೇಶಿಸಿದ್ದರು. ದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಲು ಸೂಚಿಸಿದ್ದರು.

ಸಚಿವ ಸಂತೋಷ ಲಾಡ್ ಅವರ ಸೂಚನೆ ಮೇರೆಗೆ, ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು, ಗುಡೇನಕಟ್ಟಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಕರ್ತವ್ಯಲೋಪದ ಆಪಾದನೆ ಮೇಲೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ನಾಗರೀಕ ಸೇವಾ (ನಡ 1) ನಿಯಮಗಳು 2021 ರ ನಿಯಮ 3 (1) ನೇದನ್ನು ಪೂರ್ಣ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ನಾಗರೀಕ ಸೇವಾ ನಿಯಮಗಳು (ವರ್ಗಿಕರಣ, ನಿಯಂತ್ರಣ ಮತ್ತು ಅಪೀಲು) 1957ರ ನಿಯಮ 10 (1) (ಡ) ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತ್ತಿನಲ್ಲಿರಿಸಿ ಆದೇಶಿಸಿದ್ದಾರೆ.

ಇವರ ಕಾರ್ಯ ಪ್ರಭಾರವನ್ನು ಬೇರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ವಹಿಸುವ ಕುರಿತು ಸೂಕ್ತ ಕ್ರಮ ಜರುಗಿಸಲು ಕುಂದಗೋಳ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದ್ದಾರೆ. ಅಮಾನತ್ತುಗೊಂಡಿರುವ ಅಧಿಕಾರಿಗಳು ಜೀವನಾಂಶ ಭತ್ಯೆಗೆ ಅರ್ಹರಿರುತ್ತಾರೆ. ಅಮಾನತ್ತುಗೊಂಡ ಅಧಿಕಾರಿಗಳು ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ನಿರ್ದೇಶಿಸಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದ್ದಾರೆ.

About The Author