ರಾಮದುರ್ಗದಲ್ಲಿ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕೆಂದು ಪ್ರತಿಭಟನೆ

WhatsApp Group Join Now

ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಉಭಯ ಸರಕಾರಗಳ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ತಹಶೀಲ್ದಾ‌ರ್ ಮೂಲಕ ಕೇಂದ್ರದ ರೈಲ್ವೆ ಸಚಿವ, ರಾಜ್ಯದ ರಾಜ್ಯಪಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದ ಹೋರಾಟಗಾರರು, ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಈ ಭಾಗದ ಜನತೆಯ ಬೇಡಿಕೆ ಈಡೇರಿಸಲು ಉಭಯ ಸರಕಾರಗಳು ಆಸಕ್ತಿ ಹೊಂದಿಲ್ಲ ಎಂದು ದೂರಿದರು.

ರಾಮದುರ್ಗ ತಾಲೂಕಿನಲ್ಲಿ ರೈಲ್ವೆ ಹೋರಾಟಗಾರರ ಒತ್ತಾಯದ ಮೇರೆಗೆ 2019ರಲ್ಲಿ ಹೊಸ ರೈಲು ಮಾರ್ಗಕ್ಕಾಗಿ ಸರ್ವೆ ಕಾರ್ಯ ನಡೆಸಿದ ಕೇಂದ್ರ ಸರಕಾರ

ಕಾಮಗಾರಿ ಆರಂಭಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. 2019ರ ನಂತರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಈ ಭಾಗದ ಜನರ ಬೇಡಿಕೆಗೆ ಉಭಯ ಸರಕಾರಗಳು ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟದೊಂದಿಗೆ ತಾಲೂಕಾ ಆಡಳಿತ ಕಚೇರಿ, ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿಉಪವಾಸ ಸತ್ಯಾಗ್ರಹಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ನ್ಯಾಷನಲ್ ಹ್ಯೂಮನ ರೈಟ್ಸ್‌ನ ರಾಜ್ಯಾಧ್ಯಕ್ಷ ಹಾಗೂ ರೈಲು ಹೋರಾಟ ಸಮಿತಿಯ ಬಸೀರಅಹ್ಮದ ಬೈರಕದಾರ, ನ್ಯಾಯವಾದಿ ಜಿ.ಬಿ. ಅಮಟೂರ, ಮೋಹನ ಸೋರಿ, ಎಸ್.ಕೆ. ಪಾಟೀಲ, ರಾಜು ಹರ್ಲಾಪೂರ, ರೈತ ಮುಖಂಡ ಜಗದೀಶ ದೇವರಡ್ಡಿ, ಬಸವರಾಜ ಗುರಡ್ಡಿ, ದಾದಾಪೀರ ಹಾಜಿ, ಮಂಜುನಾಥ ಮಾದರ, ಬಿ.ಎಲ್. ಸಂಕನಗೌಡ್ರ, ಈರಣ್ಣ ಕಲ್ಯಾಣಿ, ಪ್ರಶಾಂತ ಅಂಗಡಿ, ವಿರೇಶ ಬಳಿಗೇರ, “ಕಾಸಿಂ ಪಡದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು

|

About The Author