ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮಾದಕ ವ್ಯಸನದ ಅಪಾಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಗುರಿಯನ್ನು ಹೊಂದಿತ್ತು.
ಮಾದಕ ವಸ್ತುಗಳ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಜಾಗೃತಿ ಮೂಡಿಸಲಾಯಿತು.
ಮಾದಕ ವಸ್ತು ಸೇವನೆ, ಮಾರಾಟ ಮತ್ತು ಸಾಗಾಟ ಕಾನೂನು ಪ್ರಕಾರ ಅಪರಾಧ. ಯುವ ಸಮುದಾಯ ಇಂತಹ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಇದನ್ನು ನಿಯಂತ್ರಿಸಲು ಪ್ರಜ್ಞಾವಂತ ಯುವಕರು ಹಾಗೂ ವಿದ್ಯಾರ್ಥಿಗಳು ಮುಂದಾಗಬೇಕಿದೆ. ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಶಾಲಾ ಆವರಣದಲ್ಲಿ ಗಾಂಜಾ ಸೇವನೆ, ಮಾದಕ ವಸ್ತುಗಳ ಬಳಕೆ ಕಂಡು ಬಂದರೆ ತಕ್ಷಣ ಪೊಲೀಸರಿಗೆ ಅಥವಾ ಶಾಲಾ ಆಡಳಿತ ಮಂಡಳಿ, ಶಿಕ್ಷಕರಿಗೆ ತಿಳಿಸಬೇಕು. ಅಪರಾಧ ಕೃತ್ಯಗಳ ಸಂದರ್ಭದಲ್ಲಿ 112 ಸಹಾಯವಾಣಿಗೆ ಕರೆ ಮಾಡಿದರೆ ಪೊಲೀಸರು ತಕ್ಷಣ ಸ್ಥಳಕ್ಕೆ ಬರುತ್ತಾರೆ’ ಎಂದು ರಾಮದುರ್ಗ ಪಿಎಸ್ಐ ಸವಿತಾ ಮುನ್ಯಾಳ ಮಾಹಿತಿ ನೀಡಿದರು.



