ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ, ಕಾರ್ಮಿಕ ಇಲಾಖೆ, ಇವರುಗಳ ಸಹಯೋಗದಲ್ಲಿ ಜಿ.ಜಿ.ಚೋಪ್ರಾ ಸರ್ಕಾರಿ ಪಿ.ಯು.ಕಾಲೇಜಿನಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.
ಗೌರವಾನ್ವಿತ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ ಗುರುತಿಸಿದರೆ ಕಾಲೇಜು ಮಟ್ಟದಲ್ಲಿ ವಿಧ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಎಲ್ಲರೂ ಯೋಚಿಸಿ, ? ಕಾಲೇಜು ಮಟ್ಟದಲ್ಲಿ ವಿಧ್ಯಾರ್ಥಿಗಳ ಸಂಖ್ಯೆ ಏಕೆ ಕಡಿವೆುಯಾಗುತ್ತಿದೆ. ಅಂದರೆ ಇವೆಲ್ಲ ಮಕ್ಕಳು ಕಾಲೇಜು ಬಿಟ್ಟು ಕೆಲಸಕ್ಕೆ ಹೊಗುತ್ತಿದ್ದಾರೆ ಅಂತ ಅರ್ಥ ಅಲ್ಲವೇ, ಯಾವುದೇ ಮಕ್ಕಳು 18 ವರ್ಷ ಪೂರ್ಣಗೊಳಿಸುವವರೆಗೂ ಕೆಲಸದಲ್ಲಿ ತೊಡಗುವಂತಿಲ್ಲ. ಶಿಕ್ಷಣದಿಂದ ಡ್ರಾಫೌಟ್ ಆದ ಮಕ್ಕಳೇ ಹೆಚ್ಚು ಹೆಚ್ಚು ತೊಂದರೆಗೆ ಬಲಿಯಾಗುತ್ತಿದ್ದಾರೆ. ಜೀವನದಲ್ಲಿ ಎಷ್ಟೇ ಅಡೆತಡೆಗಳು ಹಾಗೂ ತೊಂದರೆಗಳೂ ಬಂದರೂ ಸಹ ನಮ್ಮ ಮನಸ್ಸು ದೃಢವಾಗಿರಬೇಕು. ನಮ್ಮ ನೆರೆ-ಹೊರೆಯಲ್ಲಿ ಯಾವುದಾದರೂ ಮಕ್ಕಳನ್ನು ಕೆಲಸದಲ್ಲಿ ತೋಡಗಿಸಿರುವುದು ಕಂಡು ಬಂದರೆ 1098 ಗೆ ಕರೆ ಮಾಡಿ ತಿಳಿಸಬೇಕು. ಮಕ್ಕಳ ರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಜನರ ಸಹಕಾರ ಇಲ್ಲದೇ ಸರ್ಕಾರದ ಯಾವ ಯೋಜನೆಗಳು ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸಲು ಎಲ್ಲರೂ ಕೈ ಜೊಡಿಸಿ ಎಂದು ಹೇಳಿದರು.
ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಶ್ರೀಮತಿ. ಸಾವಿತ್ರಿ ಶಿಬಾರಗಟ್ಟಿ , ರವರು ಮಾತನಾಡಿ ಪ್ರತೀ ವರ್ಷ ಜೂ.12ರಂದು ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ ಮಾಡಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುಧ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು. ಬಾಲಕಾರ್ಮಿಕ ಪದ್ಧತಿಯು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಅಭಿವೃದ್ಧಿಯನ್ನು ಹೇಗೆ ಹಾನಿಗೊಳಿಸುತ್ತದೆ ಎಂಬುದರ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಬಾಲಕಾರ್ಮಿಕ ಪದ್ಧತಿಯನ್ನು ಕೊನೆಗೊಳಿಸಲು ಸರ್ಕಾರಗಳು, ಸಂಘಟನೆಗಳು ಮತ್ತು ವ್ಯಕ್ತಿಗಳು ಅನೇಕ ಕ್ರಮ ಕೈಗೊಳ್ಳಲಾಗಿದೆ. ಬಾಲಕಾರ್ಮಿಕರಾಗಿರುವ ಮಕ್ಕಳಿಗೆ ಬೆಂಬಲ ನೀಡುವುದು ಮತ್ತು ಅವರನ್ನು ಶಾಲೆಗೆ ಸೇರಿಸಲು ಸಹಾಯ ಮಾಡುವುದು ಅತೀ ಅವಶ್ಯವಾಗಿದೆ. ಈ ದಿನದಂದು ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸಲು ಮತ್ತು ಅದನ್ನು ತೊಡೆದುಹಾಕಲು ನಾವು ಬದ್ಧರಾಗಿರಬೇಕು ಎಂದು ಹೇಳಿದರು.
ಅಧ್ಯಕ್ಷತೆ ಭಾಷಣ ಮಾಡಿದ ತಹಶೀಲ್ದಾರರಾದ ಶ್ರೀ. ಎಮ್.ಎನ್. ಹೆಗ್ಗನ್ನವರ ರವರು ಮಾತನಾಡಿ ಮಗುವಿನ ವಯಸ್ಸು, ದೈಹಿಕ ಅಥವಾ ಮಾನಸಿಕ ಸಾಮರ್ಥ್ಯಕ್ಕೆ ಸೂಕ್ತವಲ್ಲದ ಕೆಲಸವನ್ನು ಬಾಲ ಕಾರ್ಮಿಕ ಪದ್ದತಿ ಎಂದು ಹೇಳಲಾಗುತ್ತದೆ. 18 ವರ್ಷದೊಳಗಿನ ಮಕ್ಕಳಿಗೆ ಯಾವುದೇ ಸಂಘ-ಸಂಸ್ಥೆ, ವೈಯಕ್ತಿಕವಾಗಿಯೂ ಯಾರೂ ಸಹ ಕೆಲಸಕ್ಕಾಗಿ ಬಳಸಿಕೊಳ್ಳಬಾರದೆಂದು ಕಾನೂನಿದ್ದು ಅಂತಹದ್ದು ಕಂಡು ಬಂದರೆ ಅವರ ವಿರುಧ್ಧ ಕಾನೂನಿನಲ್ಲಿ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಎಂದರು.
ಕಾರ್ಯಕಮದಲ್ಲಿ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳಾದ, ಎ.ಎಸ್.ಬಡಕುಂದ್ರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ, ಜೆ.ಬಿ.ಮುನವಳ್ಳಿ, ಕಾಲೇಜಿನ ಪ್ರಾಚಾರ್ಯರಾದ, ಆರ್.ಪಿ.ಕೌಜಲಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ, ಆರ್.ಆರ್.ಕುಲಕರ್ಣಿ, ಕಾರ್ಮಿಕ ನೀರೀಕ್ಷಕರಾದ, ಎಮ್.ವಿ.ಭಾಗೋಜಿ, ಇತರರು ಉಪಸ್ಥಿತರಿದ್ದರು.
ಕಾಲೇಜಿನ ಶಿಕ್ಷಕರಾದ ವಿ.ಎಸ್.ಹಿರೇಮಠ ರವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.



