ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ನಿರಂತರ ಬಳಕೆಗೆ ಆದ್ಯತೆ ನೀಡಬೇಕು: ಡಾ. ಪುರುಷೋತ್ತಮ ಬಿಳಿಮಲೆ

WhatsApp Group Join Now

ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ಎಲ್ಲ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಇರಬೇಕು. ಆದರೆ ನಗರದಲ್ಲಿ ಸರ್ಕಾರದ ಈ ನಿಯಮ ಸರಿಯಾಗಿ ಪಾಲನೆಯಾಗಿಲ್ಲ ಎಂಬುವುದು ಕಂಡುಬರುತ್ತಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ಈ ಕುರಿತು ಕ್ರಮವಹಿಸಬೇಕು ಎಂದರು.

ಎಲ್ಲ ಪ್ರಕಾರದ ಅಂಗಡಿ, ಮುಗ್ಗಟ್ಟುಗಳ ಹಾಗೂ ಇತರ ನಾಮಫಲಕಗಳಲ್ಲಿ ಶೇ. ೬೦ ರಷ್ಟು ಕನ್ನಡ ಅಕ್ಷರಗಳು ಇರುವಂತೆ ನೋಡಿಕೊಳ್ಳಬೇಕು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಡಗಾವಿಯ ಗಡಿ ಭವನ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ಮಹಾನಗರ ಪಾಲಿಕೆಯಿಂದ ಗಡಿ ಭವನ ಸಮರ್ಕವಾಗಿ ನಿರ್ವಹಣೆಯಾಗುತ್ತಿಲ್ಲ. ಗಡಿ ಭವನ ಕಾರ್ಯಕ್ರಮ, ಸಭೆ ಸಮಾರಂಭ ಆಯೋಜನೆ ಅಥವಾ ಸರ್ಕಾರಿ ಕಚೇರಿ ಉಪಯೋಗಕ್ಕೆ ಕ್ರಮ ವಹಿಸಬೇಕು ಎಂದು ಹೇಳಿದರು.

ವೇಗಾ ಹೆಲ್ಮೆಟ್ ಘಟಕದಲ್ಲಿ ಕನ್ನಡ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲಾಗಿರುವ ಕುರಿತು ದೂರುಗಳು ಕೇಳಿ ಬರುತ್ತಿವೆ. ಪಾಲಿಕೆ, ಕೈಗಾರಿಕೆ ಇಲಾಖೆ ಸಮನ್ವಯದೊಂದಿಗೆ ವೇಗಾ ಹೆಲ್ಮೆಟ್ ಕಂಪನಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಒಂದುವೇಳೆ ಕನ್ನಡಿಗರಿಗೆ ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸಲು ಮುಂದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ
ಸಂತೋಷ್ ಹಾನಗಲ್ ಮಾತನಾಡಿ ಕಚೇರಿ ವೇಳೆಯಲ್ಲಿ ಕನ್ನಡ ಬಳಕೆ ಮಾಡದೇ ಇರುವ ಕುರಿತು ಸಾರ್ವಜನಿಕರ ದೂರುಗಳು ಬಂದಲ್ಲಿ ಅಂತವರ ವಿರುದ್ಧ ನೋಟಿಸ್ ಜಾರಿ ಮಾಡಿ ಕ್ರಮ ಜರುಗಿಸುವ ಕುರಿತು ಪಾಲಿಕೆಯಿಂದ ನೌಕರರ ಪಟ್ಟಿ ಪಡೆಯಲಾಗುವುದು.

ಮಹಾನಗರ ಪಾಲಿಕೆಯ ವ್ಯಾಪ್ತಿಯ ಅಂಗಡಿ-ಮುಂಗಟ್ಟುಗಳು
ಪರವಾನಿಗೆ ಪಡೆಯಲು ಕನ್ನಡ ನಾಮಫಲಕ ಕಡ್ಡಾಯವಾಗಿರುತ್ತದೆ. ಕನ್ನಡ ನಾಮಫಲಕ ಅಳವಡಿಸದ ಅಂಗಡಿ-ಮುಂಗಟ್ಟು-ವಾಣಿಜ್ಯ ಮಳಿಗೆಗಳಿಗೆ ಪರವಾನಿಗೆ ಶೇಕಡಾ ೬೦% ಕನ್ನಡ ನಾಮಫಲಕ ಅಳವಡಿಸಬೇಕು ಇಲ್ಲವಾದಲ್ಲಿ ಅಂತವರ ಪರವಾನಿಗೆ ರದ್ದು ಪಡಿಸಬೇಕು ಎಂದು ಸಂತೋಷ್ ಹಾನಗಲ್ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಾಮ ನಿರ್ದೇಶತ ಸದಸ್ಯರಾದ
ದಾಕ್ಷಾಯಿಣಿ ಹುಡೇದ, ಕನ್ನಡಪರ ಹೋರಾಟಗಾರ, ಗಡಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಅಶೋಕ ಚಂದರಗಿ, ಮಹಾನಗರ ಪಾಲಿಕೆ ಆಯುಕ್ತರಾದ ಶುಭ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ,
ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಕಂದಾಯ ವಿಭಾಗದ ಉಪ ಆಯುಕ್ತರಾದ ರೇಷ್ಮಾ ತಾಳಿಕೋಟಿ ಸೇರಿದಂತೆ ಪಾಲಿಕೆ ಅಧಿಕಾರಿಗಳು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

About The Author