WhatsApp Group
Join Now
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ಶನಿವಾರ ದಿನಾಂಕಃ 13-09-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.

ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 8563 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 2458 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 914 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೇ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ, ಪಕ್ಷಗಾರರ ನ್ಯಾಯಾಲಯದ ದೀರ್ಘಾವಧಿಯ ಪ್ರಕ್ರಿಯೆ ಮತ್ತು ವೆಚ್ಚವನ್ನು ತಪ್ಪಿಸಬಹುದು. ಇದು ನ್ಯಾಯಾಲಯದ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಪಕ್ಷಗಾರರಿಗೆ ತ್ವರಿತ ಮತ್ತು ಸುಲಭವಾದ ಪರಿಹಾರವನ್ನು ಒದಗಿಸುತ್ತದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ, ರವರು ತಿಳಿಸಿದರು.
ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ರವರು ಮಾತನಾಡಿ ಈ ಬಾರಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ಆರಂಭಿಸಲಾಗಿತ್ತು. ಮಧ್ಯಸ್ಥಿಕೆ ಮೂಲಕ ರಾಜೀ ಮಾಡಿಕೊಂಡ ಪ್ರಕರಣಗಳನ್ನು ಸಹ ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ ಎಂದರು. ಜೊತೆಗೆ ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳವುದರಿಂದ ಉಭಯ ಪಕ್ಷಗಾರರ ಬಾಂಧವ್ಯವು ಉಳಿಯುತ್ತದೆ. ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಕಡಿಮೆ ಕರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ಒಳ್ಳೆಯ ಅವಕಾಶವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ,ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಗಳಾದ ಎಸ್.ಎಸ್.ಕಾಳಪ್ಪನವರ ಸಹಾಯಕ ಸರ್ಕಾರಿ ಅಭಿಯೋಜಕರಾದ ಮಂಜುನಾಥ ಸನ್ನಿಂಗನವರ, ಎಸ್.ಎಸ್.ಅಂಗಡಿ, ವಕೀಲ ಸಂಧಾನಕಾರರಾದ ಎಸ್.ಎಮ್.ಗೊಂದಕರ, ಎಸ್.ವಿ.ಶಿರಹಟ್ಟಿಮಠ, ಜೆ.ಎಮ್.ತಾಂಬೋಳಿ ಹಾಗೂ ನ್ಯಾಯವಾದಿಗಳಾದ ಎಮ್.ಬಿ.ದ್ಯಾಮನಗೌಡರ, ಎಮ್.ಎನ್.ಮುತ್ತಿನ, ಸಿ.ಜಿ.ತುರಮರಿ, ಎಮ್.ಎಸ್.ಕುರಿ, ಎಮ್,ಕೆ.ಹೊಸಮಠ, ಎ.ಎಮ್.ಭಾಗೋಜಿಕೊಪ್ಫ, ಬಿ.ಕೆ.ಕಡಕೋಳ, ಎಮ್.ಎಫ್.ಬಾಡಿಗೇರ, ವಾಯ್.ಪಿ.ರಾಮಜಾರ, ಎಮ್.ಎಮ್.ಮಡಿವಾಳರ ಎಫ್.ಎಮ್.ಕಾಳೆ, ಮುಂತಾದವರು ಉಪಸ್ಥಿತರಿದ್ದರು.