ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಚಾಲನೆ ನೀಡಿದರು.

WhatsApp Group Join Now

ಬೆಳಗಾವಿ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ವಾಹಿನಿಗೆ ಗುರುವಾರ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಚಾಲನೆ ನೀಡಿ ಮಾತನಾಡಿದರು ಪ್ರತಿ ವರ್ಷದಂತೆ ಈ ವರ್ಷವೂ ಸಹ “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಪ್ರತಿ ಗ್ತಾಮ ಪಂಚಾಯತ ವ್ಯಾಪ್ತಿಯಲ್ಲಿನ ಕಸದ ರಾಶಿಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸುವುದು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಫಾಯಿ ಮಿತ್ರರರಿಗೆ ಸುರಕ್ಷಾ ಶಿಬಿರಗಳನ್ನು ಹಮ್ಮಿಕೊಳ್ಳುವುದು, ತ್ಯಾಜ್ಯ ರಹಿತ ಹಬ್ಬಗಳ ಪ್ರೋತ್ಸಾಹ, ನೈಸರ್ಗಿಕ ವಿಕೋಪ ಪೀಡಿತ ಪ್ರದೇಶಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು, ಸಸಿ ನೆಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥತಿರಿದ್ದಅಧಿಕಾರಿ, ಜನಪ್ರತಿನಿಧಿಗಳು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರಿಗೆ ತಿಳಿಸಿದರು.

ಅದೇ ರೀತಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿ ಸದರಿ ದಿನದಂದು ಮಾದಕ ಮುಕ್ತ ಕರ್ನಾಟಕ ಅಭಿಯಾನದಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದಾದ ನಂತರ ಸ್ವಚ್ಛ ವಾಹಿನಿ ವಾಹನವೂ ಸ್ವ-ಸಹಾಯ ಸಂಘದ ಮಹಿಳೆಯರ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಚರಿಸಿ ಜೀಂಗಲ್ಸ ಮೂಲಕ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಸಾಮಾಜಿ ಅರಣ್ಯ ವಲಯ ಅಧಿಕಾರಿ ಗಿರೀಶ್ ಇಟಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ಸಾವಂತ, ಸಹಾಯಕ ನಿರ್ದೇಶಕ(ಗ್ರಾಉ) ಬಸವಂತ ಕಡೆಮನಿ, ಗ್ರಾಮ ಪಂಚಾಯತ ಅಧ್ಯಕ್ಷರು ಶಿಲ್ಪಾ ಪಾಟೀಲ, ಉಪಾಧ್ಯಕ್ಷರು ವಿಠ್ಠಲ ಸಾಂಬ್ರೇಕರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಣಮಂತ ಪೋಳ್, ಜಿಪಂ ಎಸ್.ಬಿ.ಎಮ್ ಯೋಜನೆಯ ಎಲ್ಲ ಜಿಲ್ಲಾ ಸಮಾಲೋಚಕರುಗಳು, ಎನ್ ಆರ್.ಎಲ್ ಎಮ್ ಯೋಜನೆಯ ಸಿಬ್ಬಂದಿಗಳು, ತಾಲೂಕಾ ಪಂಚಾಯತ ಸಿಬ್ಬಂದಿ ವರ್ಗದವರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.

About The Author