ನಾಗನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ !

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ
ಬಟಕುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಬಂದಿದೆ.
ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲಜೀವನ್ ಮಿಷನ್ (ಜೆಜೆಎಂ) ಜಾರಿಗೊಳಿಸಿದೆ. ಆದರೆ ಈ ಗ್ರಾಮದಲ್ಲಿ ಜಲಜೀವನ ಮಷೀನ್ ಇದ್ದರು ಇಲ್ಲದಂತಾಗಿದೆ
ಮೊದಲು ಸ್ವಲ್ಪ ಸ್ವಲ್ಪ ನೀರು ಬರುತ್ತಿತ್ತು ಇವಾಗ ನೀರಿಲ್ಲದೆ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಬಂದಿದೆ ಇದರ ಬಗ್ಗೆ ನಾಗನೂರ ಗ್ರಾಮಸ್ಥರು ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಬಗ್ಗೆ ತಿಳಿಸಿದರು ಕೂಡ ಇದುವರೆಗೂ ಅಧಿಕಾರಿಗಳು ಕ್ಯಾರೆ ಅನ್ನದೆ ಸುಮ್ಮನಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು

ಇದಕ್ಕೆ ಸಂಬಂಧಪಟ್ಟಂತ ಗ್ರಾಮ ಪಂಚಾಯತ್ ಅಧಿಕಾರಿಗಳು ನಾಗನೂರ ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದರು

About The Author