ಪ್ರೆಸ್ ಕ್ಲಬ್ ಹಾಗೂ ವಿಜಯ ಸೇನೆ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಉದ್ಘಾಟಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರೆಸ್ ಕ್ಲಬ್ ರಾಮದುರ್ಗ ಹಾಗೂ ವಿಜಯ ಸೇನಾ ಸಮಿತಿ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ನಾಲ್ಕನೇಯ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರ ಕೊಡುಗೆ ನೀಡಿದೆ. ಹರ್ಮನ್ ಮೊಗ್ಲಿಂಗ್ ಅವರಿಂದ ಸ್ಥಾಪಿತವಾದ ಮಂಗಳೂರು ಸಮಾಚಾರ ಕನ್ನಡ ಮೊದಲು ಪತ್ರಿಕೆಯಾಗಿದೆ ಜುಲೈ 1 ರಂದು ಕರ್ನಾಟಕದಲ್ಲಿ, ನ. 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಹೇಳಿದರು.

ಈ ವೇಳೆ ತಾಲೂಕು ಪಂಚಾಯತ್ ಇಒ ಬಸವರಾಜ ಐನಾಪೂರ ಮಾತನಾಡಿ, ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವಲ್ಲಿ ಹಾಗೂ ಸರಕಾರದ ಆಡಳಿತ ಸುಗಮವಾಗಿ ನಡೆಯುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳುವರು.

ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಯಾವುದೇ ಆಮೀಸುಗಳಿಗೆ ಒಳಗಾಗದೇ ವಸ್ತುನಿಷ್ಠ, ನಿಸ್ಪಕ್ಷಪಾತವಾಗಿ ವರದಿ ಮಾಡುವ ಪ್ರವೃತ್ತಿಗಳನ್ನು ಪತ್ರಕರ್ತರು ಮೈಗೂಡಿಸಿಕೊಂಡರೆ ಪತ್ರಿಕೆಗೆ ಹಾಗೂ ಪತ್ರಕರ್ತರನಿಗೆ ಸಮಾಜದಲ್ಲಿ ಗೌರವ ದೊರೆಯುತ್ತದೆ ಎಂದು ಹೇಳಿದರು.

ಪುರಸಭೆಯ ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ವಲಯ ಅರಣ್ಯಾಧಿಕಾರಿ ಭಾಗ್ಯಶ್ರೀ ಮಸಳಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಪ್ರತಿನಿಧಿ ಮಲ್ಲಿಕಾರ್ಜುನರಡ್ಡಿ ಗೊಂದಿ, ವಿಜಯ ಸೇನಾ ಸಂಸ್ಥಾಪಕ ಅಧ್ಯಕ್ಷ ವಿಜಯ ನಾಯ್ಕ, ಮಾತನಾಡಿದರು.

ಈ ಸಂದರ್ಭದಲ್ಲಿ ಯುವ ಉದ್ಯಮಿ ಶಿವಾನಂದ ಸಂಶಿ, ಪ್ರೆಸ್ ಕ್ಲಬ್ ಅಧ್ಯಕ್ಷ ರವಿ ಸದಾಶಿವನವರ ವಿಜಯ ಸೇನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಈರನಗೌಡ ಪಾಟೀಲ ಸ್ವಾಗತಿಸಿದರು. ಪವನ ದೇಶಪಾಂಡೆ ನಿರೂಪಿಸಿದರು. ಈರಣ್ಣ ಬುಡ್ಡಾಗೋಳ ವಂದಿಸಿದರು.

About The Author