ಸರ್ಕಾರಿ ಪ್ರೌಢಶಾಲೆ ಕಗಧಾಳದಲ್ಲಿ ಹಮ್ಮಿಕೊಂಡ ಮುನವಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ -ಕಲೋತ್ಸವ ಕಾರ್ಯಕ್ರಮ

WhatsApp Group Join Now

ಮಕ್ಕಳಲ್ಲಿರುವ ಪ್ರತಿಭೆ, ಕಲೆ , ಸಾಹಿತ್ಯಿಕ ಕೌಶಲ್ಯಗಳನ್ನು ಪ್ರದರ್ಶಿಸಲು “ಪ್ರತಿಭಾ ಕಾರಂಜಿ -ಕಲೋತ್ಸವ “ಕಾರ್ಯಕ್ರಮವು ಒಂದು ಉತ್ತಮ ವೇದಿಕೆಯಾಗಿದ್ದು,ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ ಎ ಖಾಜಿ ರವರು ಕರೆನೀಡಿದರು.

ಸರ್ಕಾರಿ ಪ್ರೌಢಶಾಲೆ ಕಗಧಾಳದಲ್ಲಿ ಹಮ್ಮಿಕೊಂಡ ಮುನವಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ “ಪ್ರತಿಭಾ ಕಾರಂಜಿ -ಕಲೋತ್ಸವ”ಕಾರ್ಯಕ್ರಮ ಉದ್ಘಾಟಿಸಿ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.ಅಲ್ಲದೇ ಸದರಿ ಕಾರ್ಯಕ್ರಮವು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದ್ದು,ಇದ್ದ ಅವಕಾಶವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಕರೆ ನೀಡಿದರು ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಸಂಘಟಿಸಿದ್ದನ್ನು ನೋಡಿ ಪ್ರಶಂಸಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ ಎನ್ ಬ್ಯಾಳಿ ಮಾತನಾಡಿ ಪ್ರತಿಭಾ ಕಾರಂಜಿಯಲ್ಲಿ ಸ್ಪರ್ಧಾಳುಗಳು ಕಾಟಾಚಾರಕ್ಕೆ ಭಾಗವಹಿಸದೆ ಏಕಾಗ್ರತೆ ಮತ್ತು ನಿರ್ದಿಷ್ಟ ಗುರಿಯೊಂದಿಗೆ ತಮ್ಮ ಕಲೆಯನ್ನು ಪ್ರಸ್ತುತ ಪಡಿಸಿದಾಗ ಮಾತ್ರ ಬಹುಮಾನ ಪಡೆಯಲು ಸಾಧ್ಯವೆಂದರು.ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕೃಷ್ಣರಡ್ಡಿ ಹ ಸವದತ್ತಿರವರು ಮಾತನಾಡಿ ಶಾಲಾ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಗೆ ತರಲು ಈ ಒಂದು ವೇದಿಕೆ ಮುಕ್ತ ಅವಕಾಶ ನೀಡಿದ್ದು, ಉಪಯೋಗಿಸಿಕೊಳ್ಳಲು ಕರೆ ನೀಡಿದರು.ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯ ಮೇಲೆ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಮಾಯಪ್ಪ ರಾ ಜೋತೆನ್ನವರ,ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶಂಕ್ರಮ್ಮ ಹರಳಕಟ್ಟಿ ಭಾಗವಹಿಸಿದ್ದರು. ವೇದಿಕೆಯ ಮೇಲೆ ಬೇರೆ ಬೇರೆ ಶಾಲೆಗಳಿಂದ ಬಂದ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.ಶಿಕ್ಷಕರಾದ ಡಿ ಬಿ ಕೊಡ್ಲಿ ಸ್ವಾಗತಿಸಿದರು.ಎಚ್ ಎನ್ ಯಡ್ರಾವಿ ಕಾರ್ಯಕ್ರಮ ನಿರೂಪಿಸಿದರು.ಬಿ ಜಿ ಪಾಟೀಲ ವಂದಿಸಿದರು.

About The Author