ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರಗತಿ ಸಭಾ ಭವನದಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಬ್ಯಾಂಕ್ ಆಪ್ ಬರೋಡಾ ಸಂಯುಕ್ತ ಆಶ್ರಯದಲ್ಲಿ ಇತ್ತಿಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ದಿ.ಮಹಾಂತೇಶ ಬೀಳಗಿ ಅವರ ಸ್ಮರಣಾರ್ಥ ಎಸ್.ಎಸ್. ಎಲ್.ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಶಿಬಿರದಲ್ಲಿ ರಾಯಚೂರಿನ ಸಂಪನ್ಮೂಲ ವ್ಯಕ್ತಿ ರಮೇಶ ಬಲ್ಲಿದ ಪಾಲ್ಗೊಂಡು ಅವರು ಮಾತನಾಡಿದರು.

ಕೇವಲ ಕನಿಷ್ಠ ಅಂಕಗಳನ್ನು ಪಡೆದು ಪಾಸ ಆದರೆ ಸಾಕೆಂಬ ಧೈಯ ಹೊಂದದೇ ಉನ್ನತ ಸಾಧನೆ ಮಾಡಬೇಕೆಂಬ ಮನೋಭಾವದಿಂದ, ಸಾಧನೆ ಮಾಡಿದ ಮಹನೀಯರ ಆದರ್ಶಗಳನ್ನು ಪಾಲನೆ ಮಾಡಿ, ನಿರಂತರ ಪರಿಶ್ರಮವಹಿಸಿ ಅಧ್ಯಯನ ಮಾಡಿದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಕಾಂಬಳೆ ಮಾತನಾಡಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಲು, ಉನ್ನತ ವ್ಯಾಸಂಗ ಆಯ್ಕೆ ಬಯಸುವ ಪ್ರಮುಖ ಘಟ್ಟವಾಗಿದೆ. ಮಕ್ಕಳು ತಮ್ಮ ಪಾಲಕರ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಲು ನಿರಂತರ ಪರಿಶ್ರಮವಹಿಸಿ ಅಧ್ಯಯನ ಮಾಡಿ, ಉತ್ತಮ ಫಲಿತಾಂಶ ಪಡೆಯಬೇಕು. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವಿವಿಧ
ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಫಲಿತಾಂಶ ಸುಧಾರಣೆಗೆ ಇಲಾಖೆಯಿಂದ ವಿನೂತನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಬ್ಯಾಂಕ್ ಆಫ್ ಬರೋಡಾ ಶಾಖಾ ವ್ಯವಸ್ಥಾಪಕ ಹಣಮಂತ್ರಾಯ ಬಿರಾದಾರ ಮಾತನಾಡಿ, ಎಸ್‌ಎಸ್ ಎಸ್‌ಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪ್ರೇರಣೆ ನೀಡಲು ಶಿಕ್ಷಣ ಇಲಾಖೆ ಹಾಗೂ ಬ್ಯಾಂಕ್ ಆಫ್ ಬರೋಡಾ ಶಾಖೆಯಿಂದ ಏರ್ಪಡಿಸಿದ ಪ್ರೇರಣಾ ಕಾರ್ಯಗಾರ ಸರ್ವರ ಸಹಕಾರದಿಂದ ನಡೆಯುತ್ತಿದೆ. ವಿದ್ಯಾರ್ಥಿಗಳ ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಎಣಿ, ಜಿಲ್ಲಾ ಸಹಕಾರ್ಯದರ್ಶಿ ವಿರೇಶ ಗಣಾಚಾರಿ, ಹೊರ್ತಿಯ ಸೂರ್ಯೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ರೇವಣಸಿದ್ದಪ್ಪ ಪೂಜಾರಿ, ಶಿಕ್ಷಣ ಸಂಯೋಜಕರಾದ ಎಸ್‌. ಎನ್. ಕರಲಿಂಗಪ್ಪನವರ, ಜಿ. ಎನ್ ಶೇಖ, ಬ್ಯಾಂಕ್ ಆಫ್ ಬರೋಡಾ ಸಹ ವ್ಯವಸ್ಥಾಪಕ ಶಿವಕುಮಾರ ಉಡುಮುಡಿ ಸೇರಿದಂತೆ ಪಾಲ್ಗೊಂಡಿದ್ದರು.

.

About The Author