ಬಾಲ್ ಬ್ಯಾಡ್ಮಿಂಟನ್ ನಲ್ಲಿರಾಮದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುಮಾರಿ ಉಮ್ಮಿ ಸಾನಿಯಾ ನಾಸಿಪುರ ರಾಚವಿವಿ ದ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ

WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಕುಮಾರಿ ಉಮ್ಮಿ ಸಾನಿಯಾ ನಾಸಿಪುರ ಈತಳು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾಳೆ. ಫೆಬ್ರುವರಿ 11ರಂದು ಚೆನ್ನೈನಲ್ಲಿ ಜರುಗಲಿರುವ ಅಂತರ್ ವಿಶ್ವವಿದ್ಯಾಲಯಗಳ ಬಾಲ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಮ್ಮಿ ಸಾನಿಯಾ ನಾಸಿಪುರ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾಕ್ಟರ್ ಎಂ ಡಿ ಕಮತಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಾಲ್ ಬ್ಯಾಡ್ಮಿಂಟನ್ ನಲ್ಲಿ ವಿಶ್ವವಿದ್ಯಾಲಯದ ಕ್ರೀಡಾಪಟುವಾಗಿ ವಿದ್ಯಾರ್ಥಿನಿ ಆಯ್ಕೆಗೊಂಡದ್ದಕ್ಕಾಗಿ ಕಾಲೇಜಿನ ಸಿಡಿಸಿ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
