ಧಾರವಾಡ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅವರು ಇಂದು ಅಧಿಕಾರ ಸ್ವೀಕರಿಸಿದರು

WhatsApp Group Join Now

ಧಾರವಾಡ ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಹಿರಿಯ ಐಎಎಸ್ ಅಧಿಕಾರಿ ಸ್ನೇಹಲ್.ಆರ್ ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ನಿನ್ನೆ ದಿನ ರಾಜ್ಯ ಸರಕಾರ ವರ್ಗಾವಣೆ ಮಾಡಿ, ಆದೇಶಿಸಿರುವ ಹಿನ್ನೆಲೆಯಲ್ಲಿ ಸ್ನೇಹಲ್.ಆರ್. ಅವರು ಇಂದು ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪೆÇ್ರಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಪದಾಧಿಕಾರಿಗಳು, ಹಿತೈಷಿಗಳು ಇದ್ದರು.

About The Author