ಬೆಳಗಾವಿ ಟ್ರಾೃಕ್ಟರ್ ಮತ್ತು ಇತರೆ ವಾಹನಗಳಲ್ಲಿ ಕಾನೂನು ಬಾಹಿರವಾಗಿ ಅಳವಡಿಸಿರುವ ಸೌಂಡ್ ಸಿಸ್ಟಮ್‌ಗಳಿಗೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಮದುರ್ಗ ತಾಲೂಕಿನ ಓಬಳಾಪುರದ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಸೋಮವಾರದಿಂದ ಶ್ರೀನಿವಾಸಗೌಡ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಧರಣಿ ಆರಂಭಿಸಿದ್ದು, ಮೊದಲ ದಿನ ಕರುನಾಡ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಬೆಂಬಲ ವ್ಯಕ್ತಪಡಿಸಿ ಹೋರಾಟದಲ್ಲಿ ಭಾಗಿಯಾಗಿದ್ದರು.
ಎರಡನೆಯ ದಿನ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಯಿಂದ ಬೆಂಬಲ ವ್ಯಕ್ತಪಡಿಸಿದರು ಹೋರಾಟದಲ್ಲಿ ಭಾಗಿಯಾಗಿದ್ದರು.
3 ನೇ ದಿನದ ಉಪವಾಸಧರಣಿಸತ್ಯಾಗ್ರಹ ಬೆಳಗಾವಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಮುಂದುವರೆದಿದೆ
ಕಾನೂನು ಬಾಹಿರವಾಗಿ ಟ್ರಾೃಕ್ಟರ್ ಮತ್ತಿತರೆ ವಾಹನಗಳಿಗೆ ಡಿಜೆ ಸೌಂಡ್ ಅಳವಡಿಸಿ ಶಬ್ದ ಮಾಲಿನ್ಯ ಮಾಡುತ್ತಿದ್ದಾರೆ. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಜತೆಗೆ ಅಶ್ಲೀಲ ಹಾಡುಗಳನ್ನು ಪ್ರಸಾರ ಮಾಡುವ ಮೂಲಕ ವಿದ್ಯಾರ್ಥಿಗಳು, ಮಕ್ಕಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುತ್ತಿದ್ದು, ಕಾನಾನೂಬಾಹಿರವಾಗಿ ನಡೆದಿರುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯಿಂದ ಪ್ರಾದೇಶಿಕ ಆಯುಕ್ತವರೆಗೂ ಮನವಿ ಸಲ್ಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಜಿಲ್ಲೆಯ ಸಾರಿಗೆ ಇಲಾಖೆ ಆರ್‌ಟಿಒ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಂಬಂಧಿತ ಇಲಾಖೆಗಳ ಮೇಲಾಧಿಕಾರಿಗಳಿಂದ ಸೂಚನೆಗಳು ಬಂದರೂ ಪಾಲಿಸುತ್ತಿಲ್ಲ. ಹೀಗಾಗಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಸಾಕಷ್ಟು ಡೆಸಿಬಲ್ ಸೌಂಡ್ ಇಟ್ಟುಕೊಂಡು ಹೋಗುವ ಟ್ರಾೃಕ್ಟರ್‌ಗಳಿಂದ ಅಪಘಾತಗಳಾಗುತ್ತಿವೆ. ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕಠಿಣ ಕ್ರಮ ಕೈಗೊಳ್ಳುತ್ತಿರುವುದು ಶ್ಲಾಘನೀಯ ಕಾರ್ಯ. ಆದರೆ ಈ ಕೆಲಸವನ್ನು ಅರ್‌ಟಿಒ ಅಧಿಕಾರಿಗಳು ಮಾಡಬೇಕಿದೆ. ಮೋಟಾರು ವಾಹನ ಕಾಯ್ದೆಗಳ ಉಲ್ಲಂಘನೆಯಾಗುತ್ತಿದ್ದರೂ ಆರ್‌ಟಿಒ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಸಾರಿಗೆ ಇಲಾಖೆಯ ಸರ್ಕಾರದ ಅಪರ ಆಯುಕ್ತರು (ಪ್ರವರ್ತನ) ರವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದರು.



