SSLC, PUC ಪರೀಕ್ಷೆ 2026 ಪರೀಕ್ಷೆಗಳ ದಿನಾಂಕ ಘೋಷಿಸಿದ ಸಚಿವ ಮಧು ಬಂಗಾರಪ್ಪ

WhatsApp Group Join Now

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪರೀಕ್ಷೆಗಳ ಫಲಿತಾಂಶ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್ 7 ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್ 24 ಕ್ಕೆ ಹೊರಬೀಳಲಿದೆ.

ಮಂಗಳವಾರ ಶಿಕ್ಷಣ ಸಚಿವ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಸಿದ್ಧತೆ ಸಭೆ ನಡೆದಿದೆ. ಈ ವೇಳೆ ಪರೀಕ್ಷಾ ದಿನಾಂಕ, ಫಲಿತಾಂಶ ಪ್ರಕಟವಾಗುವ ಸಂಭಾವ್ಯ ದಿನಾಂಕ ಮತ್ತು ಪರೀಕ್ಷೆ-2 ರ ದಿನಾಂಕಗಳನ್ನು ಘೋಷಣೆ ಮಾಡಲಾಗಿದೆ.

ಈ ಬಾರಿ 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಮತ್ತು 9,02,889 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಲಾಖೆಯು ಫಲಿತಾಂಶ ಪ್ರಕಟಿಸುವ ಸಂಭಾವ್ಯ ದಿನಾಂಕವನ್ನೂ ಈಗಲೇ ತಿಳಿಸಿದೆ. ದ್ವಿತೀಯ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7, 2026 ರಂದು ಹಾಗೂ ಎಸ್ಎಸ್ಎಲ್ಸಿ ಫಲಿತಾಂಶ ಏಪ್ರಿಲ್ 24, 2026 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳಿಗೆ ‘ಪರೀಕ್ಷೆ-2’ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಫೆ. 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಧಿಸ್ತ್ರ, ಗಧಿಣಿತ
ಮಾರ್ಚ್ 16- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ಎಸ್ಎಸ್ಎಲ್ಸಿ ಪರೀಕ್ಷೆ-1 ವೇಳಾಪಟ್ಟಿ

ಮಾರ್ಚ್ 18- ಪ್ರಥಮ ಭಾಷೆ
ಮಾರ್ಚ್ 23- ವಿಜ್ಞಾನ
ಮಾರ್ಚ್ 25- ದ್ವಿತೀಯ ಭಾಷೆ
ಮಾರ್ಚ್ 28- ಗಣಿತ
ಮಾರ್ಚ್ 30- ತೃತೀಯ ಭಾಷೆ
ಏಪ್ರಿಲ್ 2- ಸಮಾಜ ವಿಜ್ಞಾನ

ಎಸ್ಎಸ್ಎಲ್ಸಿ ಪರೀಕ್ಷೆ-2 ವೇಳಾಪಟ್ಟಿ

ಮೇ 18- ಪ್ರಥಮ ಭಾಷೆ
ಮೇ 19- ವಿಜ್ಞಾನ
ಮೇ 20- ದ್ವಿತೀಯ ಭಾಷೆ
ಮೇ 21- ಗಣಿತ
ಮೇ 22- ತೃತೀಯ ಭಾಷೆ
ಮೇ 23- ಸಮಾಜ ವಿಜ್ಞಾನ

ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕೆ.ಎಸ್.ಆರ್.ಟಿ.ಸಿ ಮತ್ತು ನಗರ ಸಾರಿಗೆ ಬಸ್ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂತಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಂಡಳಿಯ ವೆಬ್ಸೈಟ್ನಲ್ಲಿ ಸ್ಟೂಡೆಂಟ್ ಕಾರ್ನರ್ ಅಡಿಯಲ್ಲಿ ಬ್ಲೂಪ್ರಿಂಟ್, ಮಾದರಿ ಪ್ರಶ್ನೆ ಪತ್ರಿಕೆಗಳು, ಪ್ರಶ್ನೆ ಕೋಶ ಮತ್ತು ಹಿಂದಿನ ಸಾಲಿನ ಪ್ರಶ್ನೆ ಪತ್ರಿಕೆಗಳನ್ನು ಉತ್ತರಗಳ ಸಮೇತ ಒದಗಿಸಲಾಗಿದೆ.

ಇದೇ ಮೊದಲ ಬಾರಿಗೆ ಖಾಸಗಿ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ಹಾಗೂ ಅವರಿಗೆ ತಾಲೂಕು ಮಟ್ಟದಲ್ಲಿ ರಾಂಡಮೈಸ್ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜು/ಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಹಂಚಿಕೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್ಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ.

ವಾಟ್ಸಾಪ್, ಟೆಲಿಗ್ರಾಮ್, ಇನ್ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಹರಿಬಿಡುವವರ ವಿರುದ್ಧ ಮತ್ತು ವದಂತಿ ಹಬ್ಬಿಸುವವರ ವಿರುದ್ಧ ‘ಭಾರತೀಯ ನ್ಯಾಯ ಸಂಹಿತೆ’ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

About The Author