ಹಿರೇನಂದಿಹಳ್ಳಿ ಕ್ರಾಸ್‌ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

WhatsApp Group Join Now

ಬೆಳಗಾವಿ, ಚನ್ನಮ್ಮನ ಕಿತ್ತೂರು : ಸಮೀಪದ ಹಿರೇನಂದಿಹಳ್ಳಿ ಕ್ರಾಸ್‌ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸುಮಾರು 5 ರಿಂದ 6 ದಿನಗಳ ಹಿಂದೆ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯ ವ್ಯಾಪ್ತಿಯ ಗೋವಿನ ಜೋಳದ ಜಮೀನಿನಲ್ಲಿ ಒರ್ವ ವ್ಯಕ್ತಿಯನ್ನು ಕೊಲೆ ಮಾಡಿ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್‌, ಡಿವೈಎಸ್ಪಿ ವೀರಯ್ಯ ಹಿರೇಮಠ, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ್ಳ, ಜಿ.ಜಿ. ಹಂಪಣ್ಣವರ ಭೇಟಿ ನೀಡಿ ಸ್ಥಳ‌ ಪರಿಶೀಲನೆ ನಡೆಸಿದ್ದಾರೆ.

About The Author