ಬೆಳಗಾವಿ ಜಿಲ್ಲೆಯ ರಣಕುಂಡೆ ಗ್ರಾಮದ ಬಳಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.

WhatsApp Group Join Now

ಅಬಕಾರಿ ಸಿಪಿಐ ಮಂಜುನಾಥ ಮೆಳ್ಳಿಗೇರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 205 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 3 ಲಕ್ಷ 12 ಸಾವಿರ ರೂಪಾಯಿಗಳು ಎಂದು ತಿಳಿದುಬಂದಿದೆ.

ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕಾರು ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಅಬಕಾರಿ ಪೊಲೀಸರು ಮದ್ಯದೊಂದಿಗೆ ಸಾಗಾಟಕ್ಕೆ ಬಳಸಿದ್ದ ಕಾರನ್ನು ಸಹ ಸೀಜ್ ಮಾಡಿದ್ದಾರೆ. ಈ ಘಟನೆಯು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

About The Author