ಪಡಿತರ ಅಕ್ಕಿ ಕಳ್ಳ ಸಾಗಟ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

WhatsApp Group Join Now

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಘಟನಾ ಸ್ಥಳದಿಂದ ಎಂಎಚ್ 13 ಎಎ 3745 ನೋಂದಣಿ ಸಂಖ್ಯೆಯ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಸುಮಾರು 8 ಲಕ್ಷ ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author