ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ

WhatsApp Group Join Now

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಮಾರ್ಚ್ 2026ರಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು ₹3.07 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ

₹2.78 ಕೋಟಿ ನಗದು, 16.16 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ, 12.35 ಲಕ್ಷ ಮೌಲ್ಯದ 4.547 ಕೆ.ಜಿ ಬೆಳ್ಳಿ ಆಭರಣ ಸಂಗ್ರಹ ಕಳೆದ ವಾರವೂ ಹುಂಡಿ ಎಣಿಕೆ ನಡೆದಿತ್ತು

ಈ ಬಾರಿ ಮಾರ್ಚ್ 9ರಿಂದ 12ರ ಅವಧಿಯಲ್ಲಿ ನಡೆದ ಎಣಿಕೆಯಲ್ಲಿ ದಾಖಲೆ ಕಾಣಿಕೆ ಸಂಗ್ರಹ

ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು:
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ, ಮುಜರಾಯಿ ಇಲಾಖೆ ಅಧಿಕಾರಿಗಳು, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದಲೂ ಎಣಿಕೆ, ಬ್ಯಾಂಕ್ ಸಿಬ್ಬಂದಿಗಳ ಸಮ್ಮುಖದಲ್ಲಿ ಈ ಎಣಿಕೆ ಕಾರ್ಯವು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಪಾರದರ್ಶಕವಾಗಿ ನಡೆಯುತ್ತದೆ.

ಈ ಹಣವನ್ನು ಮುಂಬರುವ ದಿನಗಳಲ್ಲಿ ಭಕ್ತರಿಗೆ ಹೆಚ್ಚಿನ ಮೂಲಸೌಕರ್ಯ, ಕುಡಿಯುವ ನೀರು ಮತ್ತು ವಸತಿ ವ್ಯವಸ್ಥೆ ಕಲ್ಪಿಸಲು ಬಳಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

About The Author