ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಯುವ ಕುರಿತು ಕಾನೂನು ಅರಿವು ಕಾರ್ಯಕ್ರಮ.

WhatsApp Group Join Now

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಯುವ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸವದತ್ತಿಯ ಹಿರಿಯ ಶ್ರೇಣಿ ಸಿವ್ಹಿಲ್ ನ್ಯಾಯಾಧೀಶರಾದ ಶ್ರೀ ಸಿದ್ದರಾಮ ನೇರವೇರಿಸಿದರು.

ಅತಿಥಿಗಳಾಗಿ ಒಂದನೇ ಹೆಚ್ಚುವರಿ ಜೆ ಎಂ ಎಪ್ ಸಿ ನ್ಯಾಯಾಧೀಶರಾದ ಶ್ರೀ ಕೃಷ್ಣಪ್ಪ ಪಮ್ಮಾರ, ಸವದತ್ತಿ ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀ ಎಂ ಎಸ್ ಹುಬ್ಬಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಎಸ್ ಕಾಳಪ್ಪನವರ ವಕೀಲರು, ಹಾಗೂ ಉಪನ್ಯಾಸಕರಾಗಿ ಸವದತ್ತಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ರತ್ನಾ ಕದಮ್, ವಕೀಲರ ಸಂಘದ ಮಹಿಳಾ ಪ್ರತಿನಿಧಿ ಶ್ರೀಮತಿ ಸಾವಿತ್ರಿ ಶಿಭಾರಗಟ್ಟಿ, ಬ್ಲಾಕ್ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ರಾಜೇಂದ್ರ ಚೆಟ್ನೀಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಳಾದ ಶ್ರೀ ಅಮೃತ ಸಾಣಿಕೊಪ್ಪ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆ, ತಹಶೀಲ್ದಾರ ಕಚೇರಿ, ಶಿಶು ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ , ಪೋಲೀಸ್ ಇಲಾಖೆ,ಆಶಾ ಕಾರ್ಯಕರ್ತೆಯರು ಸೇರಿದಂತೆ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ಭಾಗವಹಿಸಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದಿಂದ ಹೇಗೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾನೂನು ಅರಿವನ್ನು ಉಪನ್ಯಾಸಕರಿಂದ ಪಡೆದುಕೊಂಡರು. ಮತ್ತು ಇಂತಹ ಕಾರ್ಯಕ್ರಮಗಳನ್ನು ದೇಶಾದ್ಯಂತ ಎಲ್ಲ ಹೆಣ್ಣು ಮಕ್ಕಳಿಗೆ ಜಾಗೃತಿವಹಿಸುವಂತೆ ಎಲ್ಲ ಕಡೆ ಕಾರ್ಯಕ್ರಮ ಮಾಡಿ ಜಾಗೃತಿ ಮೂಡಿಸುವಂತಾಗಬೇಕೆಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಶ್ರೀ ಸಿದ್ದರಾಮ ಸಾಹೇಬರು ತಿಳಿಸಿದರು.

About The Author