12 August 2026
Advertisement
ರಾಜ್ಯ

ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಕಾನ್‌ಸ್ಟೇಬಲ್, ₹1.70 ಲಕ್ಷ ಲಂಚ ಸ್ವೀಕರಿಸುವಾಗಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

WhatsApp Group Join Now

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಕಾನ್‌ಸ್ಟೇಬಲ್, ಪ್ರಕರಣವೊಂದರಿಂದ ಹೆಸರು ಕೈಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ₹1.70 ಲಕ್ಷ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಇಸ್ಪೀಟ್ ಮತ್ತು ಬಡ್ಡಿ ದಂಧೆಯ ಪ್ರಕರಣದಿಂದ ಹೆಸರು ಕೈಬಿಡಲು ಹಾಗೂ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್‌ಐ ಮತ್ತು ಕಾನ್‌ಸ್ಟೇಬಲ್ ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಭೀಮಪ್ಪ ರಬಕವಿ ಮತ್ತು ಕಾನ್‌ಸ್ಟೇಬಲ್ ಸಂತೋಷ್ ಬಿರಾದಾರ ಅವರು ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಗಳು. ಮುತ್ತಪ್ಪ ನಾಯ್ಕರ್ ಎಂಬುವವರ ಮೇಲೆ ಇಸ್ಪೀಟ್ ಆಟ ಮತ್ತು ಕಾನೂನುಬಾಹಿರ ಬಡ್ಡಿ ವ್ಯವಹಾರದ ಕೇಸ್ ಹಾಕುವುದಾಗಿ ಈ ಇಬ್ಬರು ಪೊಲೀಸರು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ್ರಕರಣದಿಂದ ಹೆಸರನ್ನು ತೆಗೆದುಹಾಕಲು ಮತ್ತು ಅವರ ಬೈಕ್ ಅನ್ನು ಮರಳಿ ನೀಡಲು ಒಟ್ಟು 2 ಲಕ್ಷ ರೂಪಾಯಿ ಹಣಕ್ಕೆ ಪಿಎಸ್‌ಐ ಭೀಮಪ್ಪ ಬೇಡಿಕೆಯಿಟ್ಟಿದ್ದರು.

ಪೊಲೀಸರ ಈ ಕಿರುಕುಳದಿಂದ ಬೇಸತ್ತ ಮುತ್ತಪ್ಪ ನಾಯ್ಕರ್ ಅವರು ಸುಮ್ಮನೆ ಕೂರದೆ, ಬಾಗಲಕೋಟೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರುದಾರ ಮುತ್ತಪ್ಪ ಮತ್ತು ಪಿಎಸ್‌ಐ ನಡುವೆ ನಡೆದ ದೂರವಾಣಿ ಕರೆಯನ್ನು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು.

ಮುತ್ತಪ್ಪ ಅವರು 1,70,000 ರೂಪಾಯಿ ಲಂಚದ ಹಣವನ್ನು ನೀಡಲು ಮುಂದಾದಾಗ, ಕಾನ್‌ಸ್ಟೇಬಲ್ ಸಂತೋಷ್ ಬಿರಾದಾರ ಮೂಲಕ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

About The Author