ಬಾಗಲಕೋಟೆ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

WhatsApp Group Join Now

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೊನೆಯ 23ನೇ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಟ್ಟು 97941 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76075 ಮತಗಳನ್ನು ಪಡೆಯುವ ಮೂಲಕ ಸೋತಿದ್ದಾರೆ.

ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಮೇಟಿ ಪರ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ. ಕೈಯಲ್ಲಿ ಪಕ್ಷದ ಬಾವುಟಗಳು, ನಾಯಕರ ಫೋಟೋಗಳನ್ನು ಹಿಡಿದು ಜಯಘೋಷ ಕೂಗುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಗೂ ಜಯಭೇರಿ ಸಾಧಿಸಿದ್ದಾರೆ.

ಬಾಗಲಕೋಟೆ : ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್​​ ಮೇಟಿ ಅಂತಿಮವಾಗಿ ಗೆದ್ದು ಬೀಗಿದ್ದಾರೆ.

ಬಿಜೆಪಿಯ ವೀರಣ್ಣ ಚರಂತಿಮಠ್​​ಗೆ ಒಟ್ಟು 76,075 ಮತಗಳು ಬಿದ್ದಿದ್ದರೆ, ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್​​ ಮೆಟಿ ಪರ 97,941 ವೋಟ್​​ ಚಲಾವಣೆ ಆಗಿದ್ದವು. ಹೀಗಾಗಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

About The Author