25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

WhatsApp Group Join Now

ಚಾಮರಾಜನಗರ ನಗರಸಭೆಯ ಕಚೇರಿಯಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಾ.ನಗರ ನಗರಸಭೆಯ ಕಂದಾಯ ನಿರೀಕ್ಷಕ ಶಕೀಲ್ ಅಹಮದ್‌, ಕಂದಾಯ ಅಧಿಕಾರಿ ಹೇಮಕುಮಾರ್ ನಿವೇಶನವನ್ನು ಇ ಖಾತೆ ಮಾಡಿಕೊಡಲು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ಪಡೆದುಕೊಳ್ಳುವಾಗ ನೇರವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಲೋಹಿತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಇ ಖಾತೆ ಮಾಡಿಕೊಡಲು ಅಧಿಕಾರಿಗಳಿಗೆ ಮಧ್ಯವರ್ತಿಯಾಗಿದ್ದ ಹಬೀಬ್ ಎಂಬಾತನನ್ನೂ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ದೂರದಾರ ಮೀಸೆ ನಾಗರಾಜು ಅವರಿಂದ ದೂರು ಪಡೆದ ಲೋಕಾಯುಕ್ತ ಪೊಲೀಸರು ಈ ಇಬ್ಬರು ಅಧಿಕಾರಿಗಳು ದೂರುದಾರರಿಂದ 25 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಚೇರಿಗೆ ದಾಳಿ ಮಾಡಿ, ಹಣ ವಶಪಡಿಸಿಕೊಂಡು ಮಧ್ಯವರ್ತಿಯೂ ಸೇರಿ ಮೂವರನ್ನು ಬಂಧಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ.

About The Author