ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರದ ಮಾರ್ಗಸೂಚಿ ಪ್ರಕಟ

WhatsApp Group Join Now

ವಸತಿ ಕಟ್ಟಡಕ್ಕೆ ಶಾಶ್ವತ ವಿದ್ಯುತ್‌ ಸಂಪರ್ಕ, ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಎದುರಾಗುತ್ತಿದ್ದ ತೊಂದರೆ ನಿವಾರಣೆಗೆ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಸ್ವಾಧೀನಾ-ನುಭವ ಪ್ರಮಾಣಪತ್ರ (ಒಸಿ) ಒದಗಿಸುವುದರಿಂದ ಒಂದು ಬಾರಿಯ ಕ್ರಮವಾಗಿ ವಿನಾಯಿತಿ ನೀಡಿ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿನಡೆದಿದ್ದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಇಂಧನ ಇಲಾಖೆಯು ಈ ಆದೇಶ ಜಾರಿಗೊಳಿಸಿದೆ. ಜಿಬಿಎ ವ್ಯಾಪ್ತಿ, ರಾಜ್ಯದ ಮಹಾನಗರ ಪಾಲಿಕೆ-ಗಳು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿ-ದಂತೆ ಇಡೀ ರಾಜ್ಯಕ್ಕೆ ವಿನಾಯಿತಿ ಆದೇಶ ಅನ್ವಯವಾಗಲಿದೆ.

2,400 ಚದರ ಅಡಿ (+ಶೇ.20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನ-ಗಳಲ್ಲಿನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್‌ ಪಾರ್ಕಿಂಗ್‌ +4 ಮಹಡಿಗಳನ್ನು ಹೊಂದಿ-ರುವ ವಸತಿ ಕಟ್ಟಡಗಳಿಗೆ ಮಾತ್ರ ವಿನಾಯಿತಿ ಸಿಗಲಿದೆ ಎಂದು ಆದೇಶದಲ್ಲಿತಿಳಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಕೊನೆ ಅವಕಾಶ
ಈ ಆದೇಶದ ದಿನಾಂಕದಿಂದ ಅಂದರೆ ಜೂ.22ರಿಂದ ಮುಂದಿನ 15 ದಿನಗಳವರೆಗೆ ಮಾತ್ರ ಹೊಸದಾಗಿ ಶಾಶ್ವತ ವಿದ್ಯುತ್‌ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಪ್ರದೇಶ, ರೈತರಿಗೆ ವಿಶೇಷ ಸವಲತ್ತು ನೀಡಲಾಗುತ್ತದೆ. ಗ್ರಾಮೀಣ ಭಾಗದ ರೈತರಿಗೆ ನೆರವಾಗುವ ನಿಟ್ಟಿನಲ್ಲಿಸರಕಾರ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದೆ.

ಗ್ರಾಮೀಣ ಪ್ರದೇಶಗಳಲ್ಲಿರೈತರು ವಾಸಿಸುವ ಮನೆಗಳು ಹಾಗೂ ಕೃಷಿ ಪೂರಕ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ ಹಾಗೂ ರೇಷ್ಮೆ ಗೂಡಿನ ಮನೆಗಳಿಗೆ ವಿನಾಯಿತಿ ನೀಡಲಾಗಿದೆ. ಈ ಆದೇಶ-ದನ್ವಯ ರಾಜ್ಯದ ಎಸ್ಕಾಂಗಳು ಸಾರ್ವ-ಜನಿಕರಿಗೆ ವಿದ್ಯುತ್‌ ಸಂಪರ್ಕ ನೀಡಲು ಅನುಸರಿಸ-ಬೇಕಾದ ಸಾಮಾನ್ಯ ಮಾರ್ಗ-ಸೂಚಿಗಳನ್ನು ಇಂಧನ ಇಲಾಖೆಯು ಪ್ರತ್ಯೇಕವಾಗಿ ಶೀಘ್ರದಲ್ಲೇ ಪ್ರಕಟಿಸಲಿದೆ.

ಗ್ರಾಮೀಣ ಪ್ರದೇಶಗಳಲ್ಲಿರೈತರು ವಾಸಿಸುವ ಮನೆಗಳು ಹಾಗೂ ಕೃಷಿ ಪೂರಕ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವ ನಿಟ್ಟಿನಲ್ಲಿ ಸಮಸ್ಯೆಗಳು ಆಗುತ್ತಿದ್ದವು. ಆದರೆ ಇದೀಗ ಸರ್ಕಾರದ ನಡೆಯಿಂದ ಅನುಕೂಲ ಆಗಲಿದೆ.

About The Author