ಸವದತ್ತಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಭೆ.

WhatsApp Group Join Now

ಬೆಳಗಾವಿ ಜಿಲ್ಲೆ ಸವದತ್ತಿ ನಗರದ ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ತಾಲೂಕು ಶೇ.100.39 ರಷ್ಟು ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಈ ಬಾರಿ ಕೂಡ ಅದೇ ಉತ್ಸಾಹ ಮತ್ತು ಜವಾಬ್ದಾರಿಯಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಯಿತು. ಪತ್ರಿಕೆಗಳು, ಕೇಬಲ್ ನೆಟ್ವರ್ಕ್ ಹಾಗೂ ಮೈಕ್ ಮೂಲಕ ಗ್ರಾಮಗಳಾದ್ಯಂತ ವ್ಯಾಪಕ ಪ್ರಚಾರ ನಡೆಸುವಂತೆ ಸೂಚಿಸಲಾಯಿತು.

ಮಹಿಳಾ ಮತ್ತು ಹಾಗೂ ಆರೋಗ್ಯ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, 0 ರಿಂದ 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ನಗರಸಭೆ ನೋಡಿಕೊಳ್ಳುವಂತೆ ಸೂಚಿಸಲಾಯಿತು.

ಯಲ್ಲಮ್ಮನಗುಡ್ಡದ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಯಾತ್ರಾರ್ಥಿಗಳ ಮಕ್ಕಳಿಗಾಗಿ ವಿಶೇಷ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಲ್ಲದೆ ಸಕ್ಕರೆ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುವ ವಲಸೆ ಕಾರ್ಮಿಕರ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಸುಗಮ ನೀಡಲು ಕ್ರಮ ಕೈಗೊಳ್ಳಲಾಗುವುದು. ಲಸಿಕಾ ತಂಡಗಳ ಸಂಚಾರಕ್ಕಾಗಿ ಅಗತ್ಯವಿರುವ ಸುಮಾರು 20 ವಾಹನಗಳ ವ್ಯವಸ್ಥೆಯನ್ನು ಆರ್.ಟಿ.ಒ. ಹಾಗೂ ಸಂಬಂಧಪಟ್ಟ ಇಲಾಖೆಗಳು ಒದಗಿಸಲಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಪಲ್ಸ್ ಪೋಲಿಯೋ ಕಾರ್ಯಕ್ರಮವು 28-06-2026 ರಂದು ಬೂತ್ ಮಟ್ಟದಲ್ಲಿ ನಡೆಯಲಿದ್ದು, ನಂತರ ಮನೆ-ಮನೆ ಭೇಟಿ ಮೂಲಕ ಲಸಿಕೆ ನೀಡುವ ಕಾರ್ಯ ಕೈಗೊಳ್ಳಲಾಗುವುದು. ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿ ಗುರುತಿಸಲ್ಪಟ್ಟಿದ್ದರೂ ನೆರೆಯ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ನಿರಂತರ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಆದ್ದರಿಂದ ಸಾರ್ವಜನಿಕರು ತಮ್ಮ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಗಳಿಗೆ ಕರೆತಂದು ಪೋಲಿಯೋ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಲಾಗಿದೆ.

ಈ ಒಂದು ಸಭೆಯಲ್ಲಿ ತಾಲೂಕಾ ವೈದ್ಯಾಧಿಕಾರಿ ಶ್ರೀ ಎಸ್. ಎಸ್. ಸಬನಿಸ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಆಶೋಕ್ ಮೂರಗೋಡ, ಅರುಣಾ ಮ್ಯಾಗೇರಿ, ಜ್ಯೋತಿ ಬಸರಿ, ವಿಜಯಲಕ್ಷ್ಮಿ ಕೊಳದ, ಜಿ.ಎಲ್. ದಂಡಗಿ, ರತ್ನಾ ಕದಮ್, ಶಂಕರ್ ನಾಯ್ಕ‌ರ್ ಉಪಸ್ಥಿತರಿದ್ದರು.

About The Author