ವಿಜ್ಞಾನ ವನಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

WhatsApp Group Join Now

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಸುವರ್ಣಸೌಧದ ಆವರಣದಲ್ಲಿರುವ “ವಿಜ್ಞಾನ ವನ”ಕ್ಕೆ ಗುರುವಾರ ಭೇಟಿ ನೀಡಿದರು.

ಮಕ್ಕಳು ಹಾಗೂ ಸಾರ್ವಜನಿಕರು ಆಟದೊಂದಿಗೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ವಿವಿಧ ಪರಿಕರಗಳನ್ನು ಅಳವಡಿಸಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿಜ್ಞಾನ ವನದಲ್ಲಿ ಸಸಿ ನೆಟ್ಟು ನೀರೆರೆದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ವಿಜ್ಞಾನ ವನದ ವಿಶೇಷತೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಗಣೇಶ ಹುಕ್ಕೇರಿ, ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಿರಣ ಘೋರ್ಪಡೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಾಥ ಕಡೋಲಕರ್, ವಲಯ ಅರಣ್ಯಾಧಿಕಾರಿ ಗಿರೀಶ ಇಟಗಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

About The Author