ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳ ಮೇಲೆ ಪುಂಡಾಟ: ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ,

WhatsApp Group Join Now

​ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಗಂಭೀರ ಘಟನೆಯೊಂದು ನಡೆದಿದ್ದು, ಕಾಲುದಾರಿ (ಫುಟ್‌ಪಾತ್) ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಕಿಡಿಗೇಡಿಗಳು ಭೀಕರವಾಗಿ ಹಲ್ಲೆ ನಡೆಸಿದ್ದಾರೆ.

​ಬೆಂಗಳೂರಿನ ಪಾದಚಾರಿಗಳ ಸುರಕ್ಷತೆಗಾಗಿ ಜಿಬಿಎ ಕೈಗೊಂಡಿರುವ ‘ಸುರಕ್ಷಿತ ಫುಟ್‌ಪಾತ್’ ಅಭಿಯಾನದ ಭಾಗವಾಗಿ ಶಿವಾಜಿನಗರ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿತ್ತು. ಈ ಸಮಯದಲ್ಲಿ ಸ್ಥಳೀಯ ರಸ್ತೆಬದಿ ವ್ಯಾಪಾರಿಗಳು ಹಾಗೂ ಕೆಲ ಕಿಡಿಗೇಡಿಗಳು ಕಾರ್ಯಾಚರಣೆಗೆ ಅಡ್ಡಿಪಡಿಸಿ, ಕರ್ತವ್ಯನಿರತ ಅಧಿಕಾರಿಗಳ ಮೇಲೆ ಏಕಾಏಕಿ ವಾಗ್ದಾಳಿ ನಡೆಸಿದ್ದಾರೆ.

​ದುಷ್ಕರ್ಮಿಗಳು ಅಧಿಕಾರಿಗಳ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿದ್ದು, ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

​ಕೊಲೆ ಯತ್ನ ಪ್ರಕರಣ ದಾಖಲು, ಐವರು ವಶಕ್ಕೆ…

​ಘಟನೆ ನಡೆದ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದ ಐವರು ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

​ಕರ್ತವ್ಯದಲ್ಲಿದ್ದ ಅಧಿಕಾರಿಗಳ ಜೀವಕ್ಕೆ ಅಪಾಯ ತಂದೊಡ್ಡಿದ್ದಕ್ಕಾಗಿ ಸೆಕ್ಷನ್ 307 (ಕೊಲೆ ಯತ್ನ) ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

​ಗಲಾಟೆಯ ನೇತೃತ್ವ ವಹಿಸಿ, ಹಲ್ಲೆಗೆ ಪ್ರಚೋದನೆ ನೀಡಿದ್ದ ಮುಖ್ಯ ಆರೋಪಿಯನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸ್ ಕಮಿಷನರೇಟ್ ತಿಳಿಸಿದೆ.

​ನಗರದಲ್ಲಿ ಪಾದಚಾರಿಗಳ ಹಕ್ಕು ಮತ್ತು ಸುರಕ್ಷತೆಗಾಗಿ ನಡೆಸಲಾಗುತ್ತಿರುವ ‘Safe Footpath’ ಅಭಿಯಾನವನ್ನು ಯಾವುದೇ ಒತ್ತಡಕ್ಕೂ ಮಣಿಯದೆ ಮುಂದುವರಿಸಲಾಗುವುದು. ಸರ್ಕಾರಿ ನೌಕರರ ಮೇಲೆ ಕೈಮಾಡಿದವರ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.” ಎಂದು ಆಡಳಿತ ವರ್ಗ ಸ್ಪಷ್ಟಪಡಿಸಿದೆ.

About The Author