ರಾಮದುರ್ಗ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

WhatsApp Group Join Now

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು

ಬೃಹತ್ ತಿರಂಗಾ ಯಾತ್ರೆ, ಬೈಕ್ ರ್ಯಾಲಿ ಹಾಗೂ ಪಥಸಂಚಲನದ ಮೂಲಕ ದೇಶಭಕ್ತಿ ಸಾರಿದ ಮಾಜಿ ಯೋಧರು ಕಾರ್ಗಿಲ್ ವೀರರನ್ನು ಸ್ಮರಿಸಿದರು.

ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಶೌರ್ಯವನ್ನು ಸ್ಮರಿಸುವ ಉದ್ದೇಶದಿಂದ ರಾಮದುರ್ಗದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ್ಯಾಲಿ ಹಾಗೂ ಪಥಸಂಚಲನ ನಡೆಯಿತು.

ಮಾಜಿ ಸೈನಿಕರು ರಾಷ್ಟ್ರಧ್ವಜ ಹಿಡಿದು ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ಸಂಚರಿಸಿ ಸಾರ್ವಜನಿಕರಲ್ಲಿ ದೇಶಪ್ರೇಮದ ಸಂದೇಶ ಸಾರಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಎನ್‌ಸಿಸಿ ವಿದ್ಯಾರ್ಥಿಗಳು ಸುಮಾರು 200 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಹಿಡಿದು ಪಥಸಂಚಲನದಲ್ಲಿ ಭಾಗವಹಿಸಿದರು. ಈ ದೃಶ್ಯ ಸಾರ್ವಜನಿಕರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ರಾಮದುರ್ಗ ಬಿಜೆಪಿ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಗಿಲ್ ವೀರರಿಗೆ ಗೌರವ ನಮನ ಸಲ್ಲಿಸಿದರು.

ಬಳಿಕ ನಗರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದ ವೀರರ ತ್ಯಾಗ ಮತ್ತು ದೇಶಸೇವೆಯನ್ನು ಸ್ಮರಿಸಲಾಯಿತು. ದೇಶದ ಭದ್ರತೆಗಾಗಿ ಜೀವವನ್ನೇ ಪಣಕ್ಕಿಟ್ಟ ಯೋಧರ ಸೇವೆ ಸದಾ ಸ್ಮರಣೀಯ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಒಟ್ಟಾರೆ, ರಾಮದುರ್ಗದಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವ ದೇಶಭಕ್ತಿಯ ಸಂಭ್ರಮಕ್ಕೆ ಸಾಕ್ಷಿಯಾಗಿದ್ದು, ಯುವಜನರಲ್ಲಿ ರಾಷ್ಟ್ರಪ್ರೇಮದ ಮನೋಭಾವ ಬೆಳೆಸುವ ಸಂದೇಶವನ್ನು ಸಾರಿತು

About The Author