ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ 6 ಪಿಡಿಒ, ಇಬ್ಬರು ಕಾರ್ಯದರ್ಶಿ, ಎಸ್ ಡಿಎ ಅಮಾನತು

WhatsApp Group Join Now

ಬೆಂಗಳೂರು : ಕೆಲಸದ ಅವಧಿ ಗ್ರಾ.ಪಂ. ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಮಾಧ್ಯಮ ವರದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ 6 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ ಹಲವು ಮಾಧ್ಯಮಗಳಲ್ಲಿ ದೃಶ್ಯ ಸಹಿತ ವರದಿ ಪ್ರಸಾರವಾಗುವಂತೆ ಪಾರ್ಟಿಯಲ್ಲಿ ಎಲ್ಲರಿಗೂ ಕಾರಣ ಕೇಳಿ ನೋಟಿಸ್ ನೀಡಿ, ಕರ್ತವ್ಯದ ಸಮಯದಲ್ಲಿ ಒಂದು ಕಡೆ ಸೇರಿ ಪಾರ್ಟಿ ಮಾಡಿರುವುದು ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಅಮಾನತು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದರು.
ಈ ಬೆಂಗಳೂರು 6 ಪಿಡಿಓ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿದ್ದ ಗ್ರಾಮಾಂತರ ಜಿಲ್ಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು, ಇಂದು ಈ ಎಲ್ಲ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶಿವಗಂಗೆ ಗ್ರಾ.ಪಂ.ನ ಗಿರೀಶ್; ಅಗಳಕುಪ್ಪೆಗ್ರಾ.ಪಂ.ನ ಹರೀಶ್; ಗೊಲ್ಲಹಳ್ಳಿ ಗ್ರಾ.ಪಂ.ನ ಪ್ರಶಾಂತ್ ಡಿ; ಮಣ್ಣೆ ಗ್ರಾ.ಪಂ.ನ ಚಿರಂಜೀವಿ; ಸೋಂಪುರ ಗ್ರಾ.ಪಂ. ರವಿಶಂಕರ್; ಬೆಟ್ಟಕೋಟೆ ಗ್ರಾ.ಪಂ.ನ ದಿನೇಶ್ ಬಿ.ಎಂ.; ಅಗಳಕುಪ್ಪೆ ಗ್ರೇಡ್ 1 ಕಾರ್ಯದರ್ಶಿ ಕೆಂಪರಂಗಯ್ಯ; ಬೂದಿಹಾಳ್ ಗ್ರಾ.ಪಂ. ಗ್ರೇಡ್ 2 ಕಾರ್ಯದರ್ಶಿ ಗಂಗಾಧರ್;ಸೋಂಪುರ ಗ್ರಾ.ಪಂ. ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಇವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತತ್ ಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಯಿತು.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021 ರ ನಿಯಮ ಉಲ್ಲಂಘನೆ ಮತ್ತು ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿಲ್ಲ ಕಾರಣದ ಮೇಲೆ ಈ ಅಮಾನತು ಆದೇಶ ಹೊರಡಿಸಲಾಗಿದೆ.

About The Author