ರಾಮದುರ್ಗ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಗುರುವಾರ ರಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ, ನ್ಯಾಯವಾದಿಗಳ ಸಂಘ, ರಾಮದುರ್ಗ ಪೋಲಿಸ್ ಇಲಾಖೆ, ರಾಮದುರ್ಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ದಿವಾಣಿ ನ್ಯಾಯಾಧೀಶರು ಹಾಗೂ ಜೆ. ಎಮ್.ಎಫ್.ಸಿ ರಾಮದುರ್ಗ ಮತ್ತು ಸದಸ್ಯ ಕಾರ್ಯದರ್ಶಿಗಳು, ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ, ಕುಮಾರಿ. ಭಾಗಶ್ರೀ, ಮಾದರ ಅವರು ಸಸಿಗೆ ನೀರು ಉಣಿಸುವುದರ ಮೂಲಕ
ಉದ್ಘಾಟಿಸಿ ಅವರು ಮಾತನಾಡಿದರು ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕವಾಗಿದ್ದು, ಇದನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು.

ಇಂದಿನ ಸಮಾಜದಲ್ಲಿ ಮಾನವ ಕಳ್ಳಸಾಗಾಣಿಕೆ ವಿವಿಧ ರೂಪಗಳಲ್ಲಿ ನಡೆಯುತ್ತಿದ್ದು, ಮಹಿಳೆಯರು, ಮಕ್ಕಳು ಹಾಗೂ ದುರ್ಬಲ ವರ್ಗದ ಜನರು ಇದರ ಪ್ರಮುಖ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದು ಅವರು ತಿಳಿಸಿದರು.

ಮಾನವ ಕಳ್ಳ ಸಾಗಾಣಿಕೆಯ ತಡೆ ಕಾಯ್ದೆ ಕುರಿತು ಎಸ್ .ಎಸ್ ಜವಳಿ ವಕೀಲರು, ಉಪನ್ಯಾಸ ಮಾಡಿದರು

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೈಶಾಲಿ ಕುಲಕರ್ಣಿ ಅವರು ನಿರೂಪಣೆ ಮಾಡಿದರು.

ಈ ವೇಳೆ ನ್ಯಾಯವಾದಿಗಳ ಸಂಘದ ಅಧ್ಯಕ್ಷರು, ಎ. ಎ ಮುದಕವಿ, ರಾಮದುರ್ಗ ಸಿ.ಪಿ .ಐ ವಿನಾಯಕ ಬಡಿಗೇರ, ಪಿ.ಎಸ್.ಐ ಸವಿತಾ ಮುನ್ಯಾಳ. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಆರ್ ಮಂಜುಳಾ, ತಾಲೂಕು ಪಂಚಾಯತ್ AD ಮಾಂತೇಶ್ ದಾಸಪ್ಪನವರ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ಪಾಲ್ಗೊಂಡಿದ್ದರು.

About The Author