ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ವತಿಯಿಂದ ರಾಮದುರ್ಗ ತಾಲೂಕಿನಲ್ಲಿ ಈ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಿ ಬೆಳೆ ಬೆಳೆದಿದ್ದರೂ, ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗುವ ಪರಿಸ್ಥಿತಿ ಎದುರಾಗಿದೆ.
ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಇತರ ಕೃಷಿ ಸಾಮಗ್ರಿಗಳನ್ನು ಖರೀದಿಸಿದ್ದಾರೆ. ಇದೀಗ ಮಳೆ ಕೊರತೆಯಿಂದ ಬೆಳೆ ನಷ್ಟವಾಗುತ್ತಿರುವುದರಿಂದ ರೈತರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ಕುಟುಂಬ ನಿರ್ವಹಣೆ ಹಾಗೂ ಕೃಷಿ ಸಾಲಗಳನ್ನು ತೀರಿಸುವುದು ರೈತರಿಗೆ ದೊಡ್ಡ ಸಮಸ್ಯೆಯಾಗಿದೆ.
ಆದ್ದರಿಂದ ಸರ್ಕಾರವು ರಾಮದುರ್ಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಪರಿಗಣಿಸಿ, ಬೆಳೆ ನಷ್ಟದ ಸಮೀಕ್ಷೆಯನ್ನು ತಕ್ಷಣ ನಡೆಸಿ, ಅರ್ಹ ರೈತರಿಗೆ ಬೆಳೆ ಪರಿಹಾರ ನೀಡಬೇಕು. ರೈತರಿಗೆ ಅಗತ್ಯವಿರುವ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಬೇಕು. ಕೃಷಿ ಸಾಲಗಳ ಬಗ್ಗೆ ಸೂಕ್ತ ಪರಿಹಾರ ಕ್ರಮ ಕೈಗೊಂಡು ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು.
ರೈತರು ದೇಶದ ಬೆನ್ನೆಲುಬಾಗಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವು ರೈತರ ಪರವಾಗಿ ನಿಂತು ಅಗತ್ಯ ನೆರವು ನೀಡಬೇಕೆಂದು ಮನವಿ ಸಲ್ಲಿಸಿದರು
ಈ ವೇಳೆ ಮಲ್ಲಿಕಾರ್ಜುನ ರಾಮದುರ್ಗ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಸುರೇಶ್ ಕುಂಜೇರಿ ತಾಲೂಕ ಅಧ್ಯಕ್ಷರು ಮಹಾದೇವ್ ತೇವಟಗಿ ತಾಲೂಕ ಗೌರವ ಅಧ್ಯಕ್ಷರು , ರಾಜು ಬಸೀನಾಯ್ಕರ್. ಮಂಜು ಕಟ್ಟಿ.ಅಶೋಕ್ ಯಾದವಾಡ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಉಪಸ್ಥಿತರಿದ್ದರು



