ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರದಲ್ಲಿ ವಿಜೃಂಭಣೆಯಿಂದ 80ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.

WhatsApp Group Join Now

ಈ ಕಾರ್ಯಕ್ರಮದಲ್ಲಿ ಶಿರಸಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ಈ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಎಂಸಿ ಸದಸ್ಯರಾದ ಬಸವರಾಜ ಕಡುಕೊಳ ಅವರು ” ಗ್ರಾಮಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಮನೆಯಿಂದ ಇಂತಿಷ್ಟು ಹಣವನ್ನು ಸಂಗ್ರಹಿಸುತ್ತವೆ, ಸಂಗ್ರಹಿಸಿದ ಈ ಹಣದಲ್ಲಿ ಶಾಲೆ ಅಭಿವೃದ್ಧಿಗೆ 5 ರಿಂದ 10% ನೀಡಿ, ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ತಿಳಿಸಿದರು.

ಹಾಗೂ ಈ ಕಾರ್ಯಕ್ರಮದಲ್ಲಿ ಶಾಳೆಯ ಸೇವಾದಳದ ವಿದ್ಯಾರ್ಥಿಗಳಿಗೆ ಬೇಕಾದ ಸಮವಸ್ತ್ರಕ್ಕೆ ದೇಣಿಗೆಯನ್ನು ನೀಡಿದ ಮಹಾನಿಯರನ್ನು ಗೌರವಿಸಲಾಯಿತು.

ಈ ಸಮಾರಂಭದ ಹಾಜರಾದ ಸರ್ವರನ್ನು ಶಾಲೆಯ ಮುಖ್ಯೋಪಾಧ್ಯಾಯರು ಸ್ವಾಗತಿಸಿದರು ಹಾಗೂ ವೀರನಗೌಡ ಸರ್ ನಿರೂಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಊರಿನ ಸರ್ವರೂ ಹಾಗೂ ಶಾಲೆಯ ಸಿಬ್ಬಂದಿಗಳು ಭಾಗವಹಿಸಿದ್ದರು .
ಈ ಕಾರ್ಯಕ್ರಮದಲ್ಲಿ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಸೇವಾದಳದ ವಿದ್ಯಾರ್ಥಿಗಳಿಂದ ಮಾಡಿದ ಪತಸಂಚಲನೆ ಗಮನ ಸೆಳೆಯಿತು

About The Author