ಕಟಕೋಳ ಸಮುದಾಯ ಆರೋಗ್ಯ ಸಹಕಾರಿ ದವಾಖಾನೆ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಾಸಕರು, ಅಶೋಕ ಮ ಪಟ್ಟಣ ಅವರಿಗೆ ಮನವಿ ಸಲ್ಲಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಜನರು ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ.
ಆದ್ದರಿಂದ ನಮ್ಮ ಪ್ರದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಮುದಾಯ ಆರೋಗ್ಯ ಸಹಕಾರಿ ದವಾಖಾನೆಯನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ, ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೇವೆ, ಔಷಧಿ, ಪ್ರಯೋಗಾಲಯ ಪರೀಕ್ಷೆ ಹಾಗೂ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತೆ
ದವಾಖಾನೆಯಲ್ಲಿ ಅಗತ್ಯವಿರುವ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ದೊರೆಯುವಂತೆ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಜನರಿಗೆ ತುರ್ತು ಆರೋಗ್ಯ ಸೇವೆ ದೊರೆಯುವಂತೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಾಸಕರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸುರೇಶ ಈರಪ್ಪ ಗುಂಜಿರಿ ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಮದುರ್ಗ, ಹಾಗೂ ಪದಾಧಿಕಾರಿಗಳು ಮತ್ತು
ಕಟಕೋಳ ಗ್ರಾಮದ ಸಾರ್ವಜನಿಕರು ಪಾಲ್ಗೊಂಡಿದ್ದರು

About The Author