ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡ ಕೆಲವೆಡೆ ಕಾನೂನು ಉಲ್ಲಂಘಿಸಿ ಕಸಾಯಿಖಾನೆಗಳ ಕಾರ್ಯಾಚರಣೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ನ ಕಾರ್ಯಕರ್ತರು ಜಂಟಿಯಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗೋಹತ್ಯೆ ಮತ್ತು ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಗೋವುಗಳ ಸಾಗಾಟ ನಡೆಯುತ್ತಿದ್ದರೆ ಅದನ್ನು ತಡೆಯಬೇಕು. ಇಂತಹ ಚಟುವಟಿಕೆಗಳಿಗೆ ಸಹಕರಿಸುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆಗಳ ಮುಖಂಡರು ಮನವಿಯಲ್ಲಿ ಒತ್ತಾಯಿಸಿದರು.
ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಜಾರಿಯಲ್ಲಿದ್ದರೂ, ಅದರ ಪರಿಣಾಮಕಾರಿ ಅನುಷ್ಠಾನವಾಗುತ್ತಿಲ್ಲ ಎಂದು ಮುಖಂಡರು ಆರೋಪಿಸಿದರು.
ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ತಕ್ಷಣ ಗಮನಹರಿಸಿ, ಕಾನೂನು ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ನ ಡಾ. ವಿಜಯೇಂದ್ರ ಜೋಶಿ ಪ್ರಕಾಶ್ ಸೂಳಿಭಾವಿ ಸಂಗಮೇಶ್ ಉದಪುಡಿ ಪುನೀತ ತಿಮ್ಮನಗೌಡ ವಿಜಯ ಸೇನಾ ಸಮಿತಿಯ ಮುಖಂಡ ವಿಜಯ ನಾಯಕ್ ಮಲ್ಲಿಕಾರ್ಜುನ ಭಾವಿಕಟ್ಟಿ ಡಾಕ್ಟರ್ ರಾಜು ಮಾದನ್ನವರ ಡಾಕ್ಟರ್ ಕೆ ವಿ ಪಾಟೀಲ್ ವೆಂಕಟೇಶ್ ಹಿರೇರೆಡ್ಡಿ ಬಸವರಾಜ ಕೋಣನ್ನವರ್ ಸುರೇಶ್ ನಂದೇಪ್ಪನವರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



