ಖಾನಾಪುರದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿ!

WhatsApp Group Join Now

ಖಾನಾಪುರದಲ್ಲಿ ಲೋಕಾಯುಕ್ತರಿಂದ ದಿಢೀರ್ ದಾಳಿ
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಆರೋಗ್ಯ ಇಲಾಖೆ ಎಸ್‌ಡಿಎ
ತಾಲೂಕಾ ಆರೋಗ್ಯಾಧಿಕಾರಿ ಡಾ. ಮಹೇಶ್ ವಶಕ್ಕೆ
ಪೌಲ್ಟ್ರಿ ಫಾರ್ಮ್ ಎನ್‌ಒಸಿಗೆ ಹಣದ ಬೇಡಿಕೆ
ಪೌಲ್ಟ್ರಿ ಫಾರ್ಮ್ ಆರಂಭಿಸಲು ಎನ್‌ಒಸಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಖಾನಾಪುರ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಎಸ್‌ಡಿಎ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 6 ಸಾವಿರ ರೂಪಾಯಿ ಲಂಚ ಪಡೆಯುವಾಗ ಸಿಬ್ಬಂದಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದೆ.

ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ ಮಾಜಿ ಸೈನಿಕ ಉದಯ ಚವಲಗಿ ಅವರು ಪೌಲ್ಟ್ರಿ ಫಾರ್ಮ್ ಆರಂಭಿಸಲು ಆರೋಗ್ಯ ಇಲಾಖೆಗೆ ಎನ್‌ಒಸಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅನುಮತಿ ನೀಡಲು ತಾಲೂಕಾ ಆರೋಗ್ಯಾಧಿಕಾರಿ ಡಾ. ಮಹೇಶ್ ಕಿವಡಸಣ್ಣವರ್ ಹಾಗೂ ಎಸ್‌ಡಿಎ ಬಿರಪ್ಪ ರಾಜಾಪುರಿ ಅವರು ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ದೂರುದಾರರು ಕದಂಬ ಸೋಶಿಯಲ್ ಫೌಂಡೇಶನ್ ಅಧ್ಯಕ್ಷ ಜೋರ್ಡನ್ ಗೋನ್ಸಾಲ್ವಿಸ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತರಿಗೆ ಅಧಿಕೃತ ದೂರು ನೀಡಿದ್ದರು.

ಲೋಕಾಯುಕ್ತ ಡಿಎಸ್‌ಪಿ ಬಿ.ಎಸ್. ಪಾಟೀಲ್ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, 6,000 ರೂಪಾಯಿ ಲಂಚ ಪಡೆಯುತ್ತಿದ್ದ ಎಸ್‌ಡಿಎ ಬಿರಪ್ಪ ರಾಜಾಪುರಿಯನ್ನು ರೆಡ್‌ಹ್ಯಾಂಡಾಗಿ ಬಂಧಿಸಿದೆ. ಪ್ರಕರಣದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ. ಮಹೇಶ್ ಕಿವಡಸಣ್ಣವರ್ ಅವರ ಪಾತ್ರದ ಕುರಿತು ತನಿಖೆ ಮುಂದುವರಿದಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

About The Author