ಜಯ ಕರ್ನಾಟಕ ರಕ್ಷಣಾ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷರಾಗಿ ಈರಣ್ಣ ಹಡಪದ ಸಣ್ಣೂರ ಆಯ್ಕೆ

WhatsApp Group Join Now

ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷರಾಗಿ ಈರಣ್ಣ ಹಡಪದ ಸಣ್ಣೂರ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀ ಕೆ.ಸಿ. ರಾಜಪ್ಪ ಅವರು ಈರಣ್ಣ ಹಡಪದ ಸಣ್ಣೂರ ಅವರನ್ನು ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಜಲ್ಲಪ್ಪಗೋಳು, ಕಲಬುರಗಿ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಕಿಳ್ಳಿ, ವಿಜಯಪುರ ಜಿಲ್ಲಾಧ್ಯಕ್ಷರಾದ ರಾಜು ಕೋಟ್ಯಾಳ, ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಮಹೇಶ ವಡ್ಡರ, ಪಾಂಡು ರಾಥೋಡ, ಸಿದ್ದು ನಾಯಕ, ಅಸ್ಫಾಖ್ ಚೌದ್ರಿ, ಸೋಮು ತಳಕೇರಿ, ಆಕಾಶ ಜಮಾದಾರ್ ಸೇರಿದಂತೆ ಜಯ ಕರ್ನಾಟಕ ರಕ್ಷಣಾ ಸೇನೆಯ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈರಣ್ಣ ಹಡಪದ ಸಣ್ಣೂರ ಅವರಿಗೆ ನೂತನ ಜವಾಬ್ದಾರಿ ದೊರೆತಿರುವುದು ಕಲ್ಯಾಣ ಕರ್ನಾಟಕ ಭಾಗದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್., ಸಮಾಜದ ಸೇವಕರು, ತಿಳಿಸಿದ್ದಾರೆ.

ನೂತನವಾಗಿ ನೇಮಕಗೊಂಡಿರುವ ಈರಣ್ಣ ಹಡಪದ ಸಣ್ಣೂರ ಅವರಿಗೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

About The Author