ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದಿಢೀರ್ ಭೇಟಿ ನೀಡಿದಉಪ ಲೋಕಾಯುಕ್ತ ಬಿ. ವೀರಪ್ಪ

WhatsApp Group Join Now

ಬೆಳಗಾವಿ, ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಶನಿವಾರ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.

ಗುತ್ತಿಗೆ ಅಧರಾಮೇಲೆ ನೀಡಲಾಗಿರುವ ಅಧಿಕೃತ 346 ಮೈನಿಂಗ್ ಕಂಪನಿಗಳಿದ್ದು, ಅನಧಿಕೃತ ಮೈನಿಂಗ್ ಕಂಡು ಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು.

ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಅನಧಿಕೃತ ಹಣದ ವಹಿವಾಟುಗಳು ಕಂಡು ಬಂದಿರುವ ಕಾರಣ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಲೋಕಾಯುಕ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು.

ಗಣಿಗಾರಿಕೆಗೆ ಬಳಸಲಾಗುವ ಜಿಪಿಎಸ್
ವಾಹನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಅನಧಿಕೃತ ವಾಹನಗಳು ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದು. ಗಣಿಗಾರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವರ ಕಾರ್ಮಿಕರಿಗೆ ಕಡ್ಡಾಯವಾಗಿ ವಿಮೆ ಪಾವತಿ ಮಾಡಬೇಕು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಸೂಚಿಸಿದರು.

About The Author