ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜ ಹಾಗೂ ಕಲಬುರಗಿ ತಾಲೂಕು ಹಡಪದ ಸಮಾಜದ ವತಿಯಿಂದ ಬೆಂಗಳೂರು ನಗರದಲ್ಲಿ ಹಡಪದ ಅಪ್ಪಣ್ಣ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸಿ, ನಿಗಮಕ್ಕೆ ಕನಿಷ್ಠ ₹100 ಕೋಟಿ ಅನುದಾನ ಮೀಸಲಿಡುವಂತೆ ಆಗ್ರಹಿಸಿ .ಇಂದು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಶಿವರಾಜ್ ತಂಗಡಗಿ ಅವರಿಗೆ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಹಾಗೂ ಕಲಬುರಗಿ ತಾಲೂಕು ಸಮಿತಿಯ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಈಗಾಗಲೇ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮ ರಚನೆಯಾಗಿದ್ದರೂ, ಇದುವರೆಗೆ ನಿಗಮಕ್ಕೆ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದು ಸಮಾಜಕ್ಕೆ ನೋವಿನ ಸಂಗತಿಯಾಗಿದೆ. ಆದ್ದರಿಂದ ಕೂಡಲೇ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ, ಸಮಾಜದ ಅರ್ಹ ಮುಖಂಡರನ್ನು ನಾಮನಿರ್ದೇಶನಗೊಳಿಸಿ, ನೂರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.
ಅಲ್ಲದೆ, ಇದೇ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಮುಖ ಬೇಡಿಕೆಗಳ ಪರವಾಗಿ ಸದನದಲ್ಲಿ ಧ್ವನಿಯಾಗಿ ಮಾತನಾಡಿ, ಸರ್ಕಾರದ ಗಮನ ಸೆಳೆಯುವಂತೆ ಸಚಿವರಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ತಾಲೂಕು ಅಧ್ಯಕ್ಷರಾದ ಚಂದ್ರಶೇಖರ ತೋನಸನಹಳ್ಳಿ ಹಾಗೂ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಉಪಸ್ಥಿತರಿದ್ದರು.



