ಪ್ರಾಸಿಕ್ಯೂಷನ್ ಪಾಲಿಟಿಕ್ಸ್!
ಬೆಂಗಳೂರು: ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮಕ್ಕೆ ಪ್ರತಿಯಾಗಿ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ರಾಜಕೀಯ ಹೋರಾಟವನ್ನು ಸರಕಾರ ತೀವ್ರಗೊಳಿಸಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಬಾಕಿ ಇರುವ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ತಾಕೀತು ಮಾಡುವ ತೀರ್ಮಾನವನ್ನು ಸಂಪುಟ ಸಭೆ ಗುರುವಾರ ಕೈಗೊಂಡಿದೆ. ಆ ಮೂಲಕ, ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್…
