ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆ
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ನಿಯಂಯ್ರಣಕ್ಕೆ ಅಗತ್ಯದ ಎಲ್ಲ ಕ್ರಮಗಳನ್ನು ಜರುಗಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ತಾಲೂಕು ಪಂಚಾಯತ ಹಾಗೂ ಇತರ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಜೊತೆಗೆ ತಾಲೂಕು ಪಂಚಾಯತಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದರು. ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ…
